ಬೆಂಗಳೂರು : ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿಗಳ ಪೈಕಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸದೆ ಇರುವ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಎಸ್.ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು ರಾಜ್ಯದಲ್ಲಿ ಕೈಗೊಳ್ಳುತ್ತಿರುವ ಕಾಮಗಾರಿಗಳಲ್ಲಿ ಕೆಲವು ಕಾಮಗಾರಿಗಳು, ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ಸಮಸ್ಯೆಗಳು, ವಿಳಂಬಿತ ಅರಣ್ಯ ತೀರುವಳಿ, ವಿದ್ಯುತ್ ಮತ್ತು ನೀರು ಸರಬರಾಜು ಉಪಯುಕ್ತತೆಗಳ ಸ್ಥಳಾಂತರಿಸಲು ಅಗತ್ಯ ಸಂಬಂಧಪಟ್ಟ ಇಲಾಖೆಯಿಂದ ವಿಳಂಬ, ಕಾನೂನು ಮತ್ತು ಸಂಹಿತೆ ಸಮಸ್ಯೆಗಳು, ಎರವಲು ಪ್ರದೇಶ / ಗಣಿಕಾರಿಗೆ ಅನುಮತಿ, ಅನೀರಿಕ್ಷಿತ ಮಳೆ, ಕೋವಿಡ್ -19, ನ್ಯಾಯಾಲಯದಲ್ಲಿನ ತಡೆಯಾಜ್ಞೆ ಮುಂತಾದ ಕಾರಣಗಳಿಂದ ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಲು ಸಾಧ್ಯವಾಗದೇ ವಿಳಂಬವಾಗಿರುತ್ತದೆ.
ಈ ಕಾಮಗಾರಿಗಳನ್ನು ಅವಧಿಯೊಳಗೆ ಪೂರ್ಣಗೊಳಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ವಿಭಾಗ/ವೃತ್ತ/ವಲಯ ಮಟ್ಟದಲ್ಲಿ 15 ದಿವಸಗಳಿಗೊಮ್ಮೆ/ಮಾಹೆವಾರು ಸಮನ್ವಯ ಸಭೆಗಳನ್ನು ಸಂಬಂಧಪಟ್ಟ ಇಲಾಖೆಗಳೊಂದಿಗೆ ನಡೆಸಲಾಗುತ್ತಿದ್ದು, ಅಗತ್ಯ ಅನುಮತಿ/ತೀರುವಳಿಗಳನ್ನು ಅಗಿಂದಾಗ್ಗೆ ನೀಡಲು ಸೂಚಿಸಲಾಗುತ್ತಿದೆ. ಅಲ್ಲದೆ ಭೂಸ್ವಾಧೀನ ಕಾರ್ಯವನ್ನು ತ್ವರಿತಗತಿಯಲ್ಲಿ ಕೈಗೊಳ್ಳಲು ಸ್ಥಳೀಯ ಉಪವಿಭಾಗಾಧಿಕಾರಿಗಳು, ಕಂದಾಯ ರವರನ್ನು ನೇಮಿಸಲಾಗುತ್ತಿದೆ. ಇಲಾಖೆ ಭೂಸ್ವಾಧೀನಾಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ಗುತ್ತಿಗೆ ಒಪ್ಪಂದದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ರಿಯಾಯಿತಿದಾರರು ನಿಯಮಿತವಾಗಿ ಕೈಗೊಳ್ಳಲಾಗುತ್ತಿದೆ. /ಗುತ್ತಿಗೆದಾರರೊಂದಿಗೆ ಪರಿಶೀಲನಾ ಸಭೆಗಳನ್ನು ಸಹ ಕೈಗೊಳ್ಳಲಾಗುತ್ತಿದೆ. ಅಲ್ಲದೇ, ಪ್ರಸಕ್ತ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಇಲ್ಲಿಯವರೆಗೆ ಈ ಸಂಬಂಧ ಸರ್ಕಾರದ ಮಟ್ಟದಲ್ಲಿಯೂ ಲೋಕೋಪಯೋಗಿ ಸಚಿವರ ಅಧ್ಯಕ್ಷತೆಯಲ್ಲಿ 10 ಸಭೆಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ 06 ಸಭೆಗಳು ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ ರವರ ಅಧ್ಯಕ್ಷತೆಯಲ್ಲಿ 10 ಸಭೆಗಳನ್ನು ಸಂಬಂಧಪಟ್ಟ ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಿ, ಹಲವಾರು ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗಿರುತ್ತದೆ ಆದಷ್ಟು ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.
Publisher: ಕನ್ನಡ ನಾಡು | Kannada Naadu