CreamA Cream article
Article

ಮಾರ್ಚ್ 27 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಸಿಟ್ಟಿಂಗ್ಸ್

ಕನ್ನಡ ನಾಡು

 

ಬೆಂಗಳೂರು : ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಮಾರ್ಚ್ 27 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಸಿಟ್ಟಿಂಗ್ಸ್ ನಡೆಸಲಿದೆ.

ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದಂತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿ, ವಿಲೇ ಮಾಡಿ ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ. ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಗಳು ಈ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.

ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆಯಲ್ಲಿನ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾರ್ಚ್ 27 ರಂದು ಸಾರ್ವಜನಿಕರಿಂದ ದೂರುಗಳು / ಅಹವಾಲುಗಳನ್ನು ಸಹ ಸ್ವೀಕರಿಸಲು ಉದ್ದೇಶಿಸಲಾಗಿದೆ. ಸಾರ್ವಜನಿಕರು ನಿಗದಿತ ದಿನಾಂಕದಂದು ಆಯೋಗದ ಮಾನ್ಯ ಅಧ್ಯಕ್ಷರು (ಹಂಗಾಮಿ) ಹಾಗೂ ಮಾನ್ಯ ಸದಸ್ಯರನ್ನು ಸಂಪರ್ಕಿಸಿ, ದೂರುಗಳನ್ನು ಸಲ್ಲಿಸಬಹುದು ಎಂದು  ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಪ್ರಭಾರ ಕಾರ್ಯದರ್ಶಿ ಎ. ದಿನೇಶ್ ಸಂಪತ್ ರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More