ಕನ್ನಡ ನಾಡು | Kannada Naadu

ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆ ತರಬೇತಿ

25 Mar, 2025


 
ಬೆಂಗಳೂರು, : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕ ಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಆಸಕ್ತರು ಏಪ್ರಿಲ್ 2 ರೊಳಗಾಗಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2515944 ಗೆ ಸಂಪರ್ಕಿಸಬಹುದೆಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಕೆ.ಬಿ.ಪ್ರವೀಣ ಅವರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Publisher: ಕನ್ನಡ ನಾಡು | Kannada Naadu

Login to Give your comment
Powered by