ಕನ್ನಡ ನಾಡು | Kannada Naadu

ಶಿವಮೊಗ್ಗ, ಕೊಡಗು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಇಂದು ಮಳೆ

26 Mar, 2025


ಕರ್ನಾಟಕದ ಹಲವೆಡೆ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಬೆಂಗಳೂರು : ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಇಂದು ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಅಫ್ಜಲ್​ಪುರ್, ಲಿಂಗಸುಗೂರು, ಸಾಗರ, ಇಂಡಿ, ಬೆಳ್ಳೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 19.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 21.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 38.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 36.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Publisher: ಕನ್ನಡ ನಾಡು | Kannada Naadu

Login to Give your comment
Powered by