ಕನ್ನಡ ನಾಡು | Kannada Naadu

ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: ಐಪಿಎಲ್‌ ಪಂದ್ಯಗಳಿಗೆ ನಮ್ಮ ಮೆಟ್ರೋ ಸೇವೆ ವಿಸ್ತರಣೆ

01 Apr, 2025

ಬೆಂಗಳೂರು: ಕ್ರಿಕೆಟ್ ಪ್ರಿಯರಿಗೆ ಬಿಎಂಆರ್ ಸಿಎಲ್ ಮಂಗಳವಾರ ಗುಡ್ ನ್ಯೂಸ್ ನೀಡಿದ್ದು, ಬೆಂಗಳೂರಿನಲ್ಲಿ ನಡೆಯುವ ಎಲ್ಲಾ ಐಪಿಎಲ್ ಪಂದ್ಯಗಳಿಗೆ ನಮ್ಮ ಮೆಟ್ರೋ ಸೇವೆಯನ್ನು ವಿಸ್ತರಿಸಿದೆ.

ಬೆಂಗಳೂರಿನಲ್ಲಿ ಒಟ್ಟು 7 ಮ್ಯಾಚ್‌ಗಳು ನಡೆಯಲಿವೆ. ಈ 7 ಪಂದ್ಯಗಳು ನಡೆಯುವ ದಿನ ಮೆಟ್ರೋ ಸಂಚಾರವನ್ನು ರಾತ್ರಿ 12:30ರ ವರೆಗೆ ವಿಸ್ತರಿಸಲಾಗಿದೆ. ನಾಲ್ಕು ಟರ್ಮಿನಲ್ ನಿಲ್ದಾಣಗಳಿಂದ ರಾತ್ರಿ 12:30ಕ್ಕೆ ಕೊನೆ ರೈಲು ಹೊರಡಲಿದೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆ ತಿಳಿಸಿದೆ.

"ನಾಡಪ್ರಭು ಕೆಂಪೇಗೌಡ ಸ್ಟೇಷನ್ ಮೆಜೆಸ್ಟಿಕ್‌ನಿಂದ ನಾಲ್ಕು ದಿಕ್ಕುಗಳಿಗೂ ಕೊನೆಯ ರೈಲು ಬೆಳಗಿನ ಜಾವ 1.15 ಕ್ಕೆ ಹೊರಡಲಿದೆ" ಎಂದು ಪ್ರಕಟಣೆ ತಿಳಿಸಿದೆ.

ಏಪ್ರಿಲ್ 2ರಂದು ಬೆಂಗಳೂರಿನಲ್ಲಿ ಈ ಸೀಸನ್‌ನ ಮೊದಲ ಐಪಿಎಲ್ ಪಂದ್ಯ ನಡೆಯಲಿದೆ. ನಂತರ ಏಪ್ರಿಲ್ 10, 18 ಮತ್ತು 24 ರಂದು ಹಾಗೂ ಮೇ 3, 13 ಮತ್ತು 17 ರಂದು ಬೆಂಗಳೂರಿನಲ್ಲಿ ಪಂದ್ಯಗಳು ನಡೆಯಲಿವೆ.

Publisher: ಕನ್ನಡ ನಾಡು | Kannada Naadu

Login to Give your comment
Powered by