ಬೆಂಗಳೂರು : ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು 2025ರ ಏಪ್ರಿಲ್ 4 ರಂದು ರಾಮನಗರ ಜಿಲ್ಲೆಯಲ್ಲಿ ಸಿಟ್ಟಿಂಗ್ಸ್ ನಡೆಸಲು ಉದ್ದೇಶಿಸಿದೆ.
ರಾಮನಗರ ಜಿಲ್ಲೆಗೆ ಸಂಬಂಧಿಸಿದಂತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಇರ್ತಥ್ಯಪಡಿಸಿ, ವಿಲೇ ಮಾಡಿ ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ. ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಗಳು ಈ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಲಾಗಿದೆ.
ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಮನಗರ ಜಿಲ್ಲೆಯಲ್ಲಿನ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಏಪ್ರಿಲ್ 4 ರಂದು ಸಾರ್ವಜನಿಕರಿಂದ ದೂರುಗಳು / ಅಹವಾಲುಗಳನ್ನು ಸಹ ಸ್ವೀಕರಿಸಲು ಉದ್ದೇಶಿಸಲಾಗಿದೆ. ಸಾರ್ವಜನಿಕರು ನಿಗದಿತ ದಿನಾಂಕದಂದು ಆಯೋಗದ ಮಾನ್ಯ ಅಧ್ಯಕ್ಷರು (ಹಂಗಾಮಿ) ಹಾಗೂ ಮಾನ್ಯ ಸದಸ್ಯರನ್ನು ಸಂಪರ್ಕಿಸಿ, ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಪ್ರಭಾರ ಕಾರ್ಯದರ್ಶಿಗಳಾದ ಎ. ದಿನೇಶ್ ಸಂಪತ್‍ರಾಜ್ ಅವರು ತಿಳಿಸಿದ್ದಾರೆ.
Publisher: ಕನ್ನಡ ನಾಡು | Kannada Naadu