ಕನ್ನಡ ನಾಡು | Kannada Naadu

ಶಿಕ್ಷಣದಿಂದ ಜ್ಞಾನ ಪಡೆದು, ಸದೃಢ ರಾಷ್ಟ್ರಕ್ಕೆ ಕೊಡುಗೆ ನೀಡಿ ದಾವಣಗೆರೆ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕರೆ ನೀಡಿದ ರಾಜ್ಯಪಾಲರು

03 Apr, 2025

 

ದಾವಣಗೆರೆ : "ಕನಸುಗಳನ್ನು ನನಸಾಗಿಸಲು ಶಿಕ್ಷಣವು ಶ್ರೇಷ್ಠ ಕೊಡುಗೆ ನೀಡಲಿದೆ. ಶಿಕ್ಷಣವು ವ್ಯಕ್ತಿಯ ಜೀವನದಲ್ಲಿ ಹೊಸ ಆಲೋಚನೆಗಳು, ಜ್ಞಾನ ಮತ್ತು ಸಾಧ್ಯತೆಗಳನ್ನು ತುಂಬುವ ನಿರಂತರ ಪ್ರಯಾಣವಾಗಿದೆ" ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

ದಾವಣಗೆರೆ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. "ಶಿಕ್ಷಣವು ನಮಗೆ ಉದ್ಯೋಗದ ಜೊತೆಗೆ ನೈತಿಕತೆ, ಸಹಾನುಭೂತಿ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಒದಗಿಸುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಜ್ಞಾನ ಪಡೆದು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು" ಎಂದರು.

"ಶ್ರೇಷ್ಠ ವಿಜ್ಞಾನಿ ಮತ್ತು ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಹೇಳಿದ್ದರು-“ಕನಸು ಎಂದರೆ ನೀವು ಮಲಗಿರುವಾಗ ನೋಡುವುದಲ್ಲ ಅದು ನಿಮ್ಮನ್ನು ನಿದ್ದೆ ಮಾಡಲು ಬಿಡುವುದಿಲ್ಲ.” ವಿದ್ಯಾವಂತ ಯುವಕರು ಮಾತ್ರ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಬಲ್ಲರು. ನೀವು ಯಾವುದೇ ಕ್ಷೇತ್ರಕ್ಕೆ ಹೋದರೂ, ವಿಜ್ಞಾನ ಕ್ಷೇತ್ರವಾಗಿರಬಹುದು, ತಂತ್ರಜ್ಞಾನ ಕ್ಷೇತ್ರವಾಗಿರಬಹುದು, ವ್ಯಾಪಾರ, ಕಲೆ ಅಥವಾ ಸಮಾಜ ಸೇವೆಯ ಕ್ಷೇತ್ರವಾಗಿರಲಿ, ನಿಮ್ಮ ಪ್ರಯತ್ನದಿಂದ ದೇಶವು ಪ್ರಗತಿ ಸಾಧಿಸುತ್ತದೆ" ಎಂದು ಹೇಳಿದರು.

"ಪ್ರಸ್ತುತ ಜಗತ್ತು ವೇಗವಾಗಿ ಬದಲಾಗುತ್ತಿದೆ. ಕೃತಕ ಬುದ್ಧಿಮತ್ತೆ, ದತ್ತಾಂಶ ವಿಜ್ಞಾನ, ಸುಸ್ಥಿರ ಅಭಿವೃದ್ಧಿ ಮತ್ತು ಉದ್ಯಮಶೀಲತೆಯಂತಹ ಕ್ಷೇತ್ರಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತಿವೆ. ಇತ್ತೀಚಿನ ತಂತ್ರಜ್ಞಾನಗಳು ಮತ್ತು ಆಲೋಚನೆಗಳೊಂದಿಗೆ ನೀವು ಯಾವಾಗಲೂ ನಿಮ್ಮನ್ನು ನವೀಕೃತವಾಗಿರಿಸಿಕೊಳ್ಳಬೇಕು. ಸ್ವಾತಂತ್ರ್ಯದ ನಂತರ ದೇಶವು ಎಲ್ಲಾ ಕ್ಷೇತ್ರಗಳಲ್ಲಿ ಅಭೂತಪೂರ್ವ ಪ್ರಗತಿಯನ್ನು ಸಾಧಿಸಿದೆ ಮತ್ತು ದೇಶದ ಆರ್ಥಿಕತೆಯು ಪ್ರಬಲವಾಗಿದೆ. ಇಂದು ನಮ್ಮ ಆರ್ಥಿಕತೆಯು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಅದನ್ನು ಮತ್ತಷ್ಟು ಬಲಪಡಿಸಲು ಮತ್ತು ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಮುಂಚೂಣಿಗೆ ತರಲು ನಿಮ್ಮ ಸಹಕಾರವು ಮುಖ್ಯವಾಗಿದೆ" ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

"ಪರಿಸರ ಅಸಮತೋಲನದ ಗಂಭೀರ ಸಮಸ್ಯೆಯ ಬಗ್ಗೆ ಯೋಚಿಸಬೇಕು. ಇಂದು ನೀರು, ಅರಣ್ಯ ಮತ್ತು ವಾಯು ಸಂರಕ್ಷಣೆಯ ನಿಟ್ಟಿನಲ್ಲಿ ಕೆಲಸ ಮಾಡುವ ಅವಶ್ಯಕತೆಯಿದೆ. ಶಿಕ್ಷಣದಿಂದ ಪಡೆದ ಜ್ಞಾನದೊಂದಿಗೆ, ಮುಂಬರುವ ಪೀಳಿಗೆಗೆ ಸ್ಫೂರ್ತಿಯ ಮೂಲವಾಗಿ "ಏಕ್ ಭಾರತ್ - ಶ್ರೇಷ್ಠ ಭಾರತ" ಮತ್ತು "ಸ್ವಾವಲಂಬಿ ಭಾರತ" ನಿರ್ಮಾಣದಲ್ಲಿ ಭಾಗವಹಿಸಿ" ಎಂದು ಕರೆ ನೀಡಿದರು.

"2009 ರಲ್ಲಿ ಸ್ಥಾಪನೆಯಾದ ದಾವಣಗೆರೆ ವಿಶ್ವವಿದ್ಯಾಲಯವು ಕಡಿಮೆ ಅವಧಿಯಲ್ಲಿ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ನಿರಂತರ ಮತ್ತು ಸಕಾರಾತ್ಮಕ ಪೂರ್ವಭಾವಿ ಪ್ರಯತ್ನಗಳ ಮೂಲಕ ಅಭಿವೃದ್ಧಿ ಹೊಂದಿದ ಭಾರತಕ್ಕೆ ಮಾನವ ಸಂಪನ್ಮೂಲಗಳನ್ನು ರೂಪಿಸುವಲ್ಲಿ ಈ ವಿಶ್ವವಿದ್ಯಾಲಯವು ಪ್ರಮುಖ ಪಾತ್ರವಹಿಸುತ್ತಿದೆ. ಘಟಿಕೋತ್ಸವದಲ್ಲಿ ಗೌರವಾನ್ವಿತ ಶ್ರೀ ಜಗದ್ಗುರು ನಿರಂಜನಾನಂದ ಪುರಿ ಸ್ವಾಮೀಜಿ, ಸಮಾಜ, ಸಾರ್ವಜನಿಕ ಹಿತಾಸಕ್ತಿ ಮತ್ತು ದೇಶದ ಹಿತಾಸಕ್ತಿಯಲ್ಲಿ ಕೆಲಸ ಮಾಡುತ್ತಿರುವ ಶ್ರೀ. ಎಸ್.ಎ.ರವೀಂದ್ರನಾಥ್, ಮತ್ತು ಪೆÇ್ರ.ಎಸ್.ಆರ್.ನಿರಂಜನ ಅವರಿಗೆ ಗೌರವ ಪದವಿ ನೀಡಿ ಗೌರವಿಸಲಾಗಿದೆ. ಅವರಿಗೆ ಅಭಿನಂದಿಸುತ್ತ, ಸಾರ್ವಜನಿಕ ಹಿತಾಸಕ್ತಿ ಮತ್ತು ದೇಶದ ಹಿತಾಸಕ್ತಿಯಲ್ಲಿ ಕೆಲಸ ಮಾಡುವುದನ್ನು ಮುಂದುವರಿಸಬೇಕು" ಎಂದು ಮನವಿ ಮಾಡಿದರು.

ಪದವಿಯನ್ನು ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಮತ್ತು ಉಜ್ವಲ ಭವಿಷ್ಯಕ್ಕಾಗಿ ಹಾರೈಸುತ್ತೇನೆ. ವಿದ್ಯಾಭ್ಯಾಸದ ಸಮಯದಲ್ಲಿ ನೀವೆಲ್ಲರೂ ಅನೇಕ ಸವಾಲುಗಳನ್ನು ಎದುರಿಸಿರಬಹುದು, ಆದರೆ ನೀವು ಅವುಗಳನ್ನು ಜಯಿಸಿದ್ದೀರಿ. ಜೀವನದ ಅತ್ಯಮೂಲ್ಯ ಕ್ಷಣಗಳಲ್ಲಿ ಒಂದಾಗಿರುವ ಈ ವಿಶೇಷ ದಿನವು ನಿಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯ ಸಂಭ್ರಮಾಚರಣೆಯ ಜೊತೆಗೆ ನಿಮ್ಮ ಕನಸುಗಳ ಹಾರಾಟದ ಆರಂಭವಾಗಿದೆ. ಈಗ ನೀವು ಶಿಕ್ಷಣದ ಹಾದಿಯಿಂದ ಅನುಭವ ಮತ್ತು ಕ್ರಿಯೆಯ ಹಾದಿಗೆ ಹೆಜ್ಜೆ ಹಾಕಲಿದ್ದೀರಿ. ನಿಮ್ಮ ಹಾದಿ ಸುಗಮವಾಗಿರಲಿ" ಎಂದು ರಾಜ್ಯಪಾಲರು ಹಾರೈಸಿದರು.

ಘಟಿಕೋತ್ಸವದಲ್ಲಿ ಡಾ.ಎಂ.ಸಿ. ಸುಧಾಕರ್, ಉನ್ನತ ಶಿಕ್ಷಣ ಸಚಿವರು, ಮುಖ್ಯ ಅತಿಥಿ ಪದ್ಮಭೂಷಣ ಪೆÇ್ರಫೆಸರ್ ಪಿ.ಬಲರಾಮ್, ವಿಶ್ವವಿದ್ಯಾಲಯದ ಕುಲಪತಿ ಪ್ರಾಧ್ಯಾಪಕ ಬಿ.ಡಿ.ಕುಂಬಾರ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Publisher: ಕನ್ನಡ ನಾಡು | Kannada Naadu

Login to Give your comment
Powered by