CreamA Cream article
Article

ಡಾ. ಪಿ .ವಿ .ನಾರಾಯಣ ಅವರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ

ಕನ್ನಡ ನಾಡು


ಬೆಂಗಳೂರು: ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಅನನ್ಯ ಕೊಡುಗೆ ನೀಡಿದ, ಹಿರಿಯ ವಿದ್ವಾಂಸ  ಡಾ.ಪಿ ವಿ ನಾರಾಯಣ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. 
ಸಾಹಿತ್ಯಕ್ಕೆ ಮಾತ್ರ ಸೀಮಿತವಾಗದೆ ಕನ್ನಡ ಚಳುವಳಿಗಳ ಮುಂಚೂಣಿಯಲ್ಲಿದ್ದ ಡಾ. ಪಿ ವಿ  ನಾರಾಯಣ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ನೀಡಿದ ಕೊಡುಗೆ ಅನನ್ಯವಾದದ್ದು. 
75ಕ್ಕೂ ಹೆಚ್ಚು ಸಾಹಿತ್ಯ ಕೃತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಕೊಡುಗೆಯಾಗಿ ನೀಡಿದ ಅವರು ವಚನ ಸಾಹಿತ್ಯ ಕುರಿತು ನಡೆಸಿರುವ ಅಧ್ಯಯನ ಹಾಗೂ  ರಚಿಸಿರುವ ಕೃತಿಗಳು ಕನ್ನಡ ಸಾಹಿತ್ಯ ಲೋಕಕ್ಕೆ ಬಹಳ ದೊಡ್ಡ ಕೊಡುಗೆಯಾಗಿವೆ. 
ಬಿ ಎಂ ಶ್ರೀ ಪ್ರತಿಷ್ಠಾನದ ಅಧ್ಯಕ್ಷರಾಗಿ ಸಹ ಅವರು ಸಲ್ಲಿಸಿದ ಸೇವೆ ಅಪಾರವಾದದ್ದು. 
ಅವರ ನಿಧನದಿಂದ ಕನ್ನಡ ಸಾಂಸ್ಕೃತಿಕ ಲೋಕ ಬಹಳ ದೊಡ್ಡ ನಷ್ಟ ಅನುಭವಿಸಿದೆ. ಭಗವಂತ  ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Read More