ಕನ್ನಡ ನಾಡು | Kannada Naadu

ಆಸ್ಪತ್ರೆಗಳಿಗೆ ಸುಪ್ರೀಂ ಕೋರ್ಟ್ ತೀಕ್ಷ್ಣ ಎಚ್ಚರಿಕೆ

15 Apr, 2025

 ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಮಕ್ಕಳ ಕಳ್ಳ ಸಾಗಾಣಿಕೆಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್. ಇನ್ನು ಮುಂದೆ ಇಂತಹ ಪ್ರಕರಣಗಳು ಮರುಕಳಿಸಿದರೆ, ಅಂತಹ ಆಸ್ಪತ್ರೆಗಳ ಪರವಾನಗಿಯನ್ನು ಲೈಸೆನ್ಸ್ ಅನ್ನು ಮುಲಾಜಿಲ್ಲದೆ ರದ್ದುಗೊಳಿಸಬೇಕು ಎಂದು ದೇಶದ ಎಲ್ಲಾ ರಾಜ್ಯಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಮಕ್ಕಳ ಕಳ್ಳಸಾಗಾಣಿಕೆ ಪ್ರಕರಣಗಳ ನಿರ್ವಹಣೆಯ ಬಗ್ಗೆ ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತಗೆದುಕೊಂಡ ಸುಪ್ರೀಂ ಕೋರ್ಟ್, ಅಂತಹ ಅಪರಾಧಗಳನ್ನು ತಡೆಯಲು ರಾಜ್ಯಗಳು ಅನುಸರಿಸಬೇಕಾದ ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಪಾಲಿಸುವಂತೆಯೂ ತಾಕೀತು ಮಾಡಿದೆ.

 ಮಕ್ಕಳ ಕಳ್ಳಸಾಗಣೆ ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್.ಮಹಾದೇವನ್ ಅವರಿದ್ದ ಪೀಠವು ಅಂತಹ ಪ್ರಕರಣಗಳ ವಿಚಾರಣೆಯನ್ನು ಆರು ತಿಂಗಳೊಳಗೆ ಪೂರ್ಣಗೊಳಿಸುವಂತೆ ಕೆಳ ನ್ಯಾಯಾಲಯಗಳಿಗೆ ಆದೇಶಿಸಿದೆ. ಯಾವುದೇ ನವಜಾತ ಶಿಶುವನ್ನು ಕಳ್ಳಸಾಗಣೆ ಮಾಡಿದರೆ ಆಸ್ಪತ್ರೆಗಳ ಪರವಾನಗಿಯನ್ನು ಮುಲಾಜಿಲ್ಲದೆ ಅಮಾನತುಪಡಿಸುವಂತೆಯೂ ಎಲ್ಲಾ ರಾಜ್ಯಗಳಿಗೆ ಆದೇಶ ಮಾಡಿದೆ.

Publisher: ಕನ್ನಡ ನಾಡು | Kannada Naadu

Login to Give your comment
Powered by