ಕನ್ನಡ ನಾಡು | Kannada Naadu

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ,ಮಂಗಳಸೂತ್ರ ತೆಗೆಸಬೇಡಿ : ಸಚಿವ ಸೋಮಣ್ಣ ಆದೇಶ

29 Apr, 2025

ಬೆಂಗಳೂರು,- ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್‌ ಸೂಪರಿಂಟೆಂಡೆಂಟ್‌ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಿರುವುದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಕೂಡಲೇ ಈ ವಿಚಾರವನ್ನು ದಕ್ಷಿಣ ಕನ್ನಡ ಬಿಜೆಪಿ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ರೈಲ್ವೆ ಇಲಾಖೆ ಸಚಿವರ ಗಮನಕ್ಕೆ ತಂದಿದ್ದರು.

ಇದರ ಬೆನ್ನಲ್ಲೇ ಸೋಮಣ್ಣ ಸೂಚನೆ ನೀಡಿದ್ದಾರೆ. ನರ್ಸಿಂಗ್‌ ಸೂಪರಿಂಟೆಂಡೆಂಟ್‌ ಹ್ದುೆಗೆ ಪರೀಕ್ಷೆ ಬರೆಯುವವರು ಮಂಗಳಸೂತ್ರ, ಜನಿವಾರದಂತಹ ಧಾರ್ಮಿಕ ಸಂಕೇತಗಳು ಮತ್ತು ಆಭರಣಗಳನ್ನು ತೆಗೆಯುವಂತೆ ಮಾಡಬಾರದು. ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಸೂಚನೆ ನೀಡಿದ್ದಾರೆ ಎಂದು ತಿಳಿಸಲು ಸಂತೋಷವಾಗುತ್ತಿದೆ.

ಮಂಗಳಸೂತ್ರ ಹಾಗೂ ಧಾರ್ಮಿಕ ಸಂಕೇತಗಳನ್ನು ತೆಗೆಯಬೇಕೆಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲ್ಪಟ್ಟಿದ್ದ ಬಗ್ಗೆ ನಾವು ಅವರ ಗಮನಕ್ಕೆ ತಂದ್ದೆಿವು. ಅವರು ಮಧ್ಯಪ್ರವೇಶಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಎಕ್ಸ್‌‍ ಮೂಲಕ ಬ್ರಿಜೇಶ್‌ ಚೌಟ ಸ್ಪಷ್ಟಪಡಿಸಿದ್ದಾರೆ.
ರೈಲ್ವೆ ಇಲಾಖೆಯ ನರ್ಸಿಂಗ್‌ ಸುಪರಿಂಟೆಂಡೆಂಟ್‌ ಹ್ದುೆಗೆ ಪರೀಕ್ಷೆಯು ಏಪ್ರಿಲ್‌ 28, 29, 30ರಂದು ಬೋಂದೆಲ್‌ನ ವಿದ್ಯಾಕೇಂದ್ರದಲ್ಲಿ ನಡೆಯಲಿದೆ. ಆ ಪರೀಕ್ಷೆ ಬರೆಯಬೇಕಾದರೆ ಹಿಂದೂಗಳು ಅವರ ಧಾರ್ಮಿಕ ಸಂಪ್ರದಾಯಗಳಾದ ಮಂಗಳಸೂತ್ರ, ಜನಿವಾರಗಳನ್ನೂ ತೆಗೆದು ಬರೆಕ್ಷೆ ಬರೆಯುವಂತೆ ಪ್ರವೇಶ ಪತ್ರದಲ್ಲಿ ಉಲ್ಲೇಖಿಸಿದ್ದರು.

 
ಈ ರೀತಿಯ ಧಾರ್ಮಿಕ ವಿರೋಧಿ ಧೋರಣೆ ಸಹಿಸಲು ಅಸಾಧ್ಯ. ಜಿಲ್ಲಾಧಿಕಾರಿಗಳು, ಸಂಸದರು ಇಂತಹ ಆದೇಶವನ್ನು ಕೈಬಿಟ್ಟು ನಡೆಯಲಿರುವ ಪರೀಕ್ಷೆಯಲ್ಲಿ ಹಿಂದೂಗಳ ಭಾವನೆಗೆ ಧಕ್ಕೆಬಾರದ ರೀತಿಯಲ್ಲಿ ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲು ಆಗ್ರಹಿಸುತ್ತೇನೆ? ಎಂದು ವಿಹಿಂಪ ಪ್ರಾಂತ ಸಹ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಆಗ್ರಹಿಸಿದ್ದರು.

ಬಿಜೆಪಿಗೆ ಮುಜುಗರ:
ಸಿಇಟಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣವನ್ನು ರಾಜ್ಯ ಸರ್ಕಾರದ ವಿರುದ್ಧ ಅಸ್ತ್ರವಾಗಿ ಬಿಜೆಪಿ ಬಳಸಿಕೊಂಡಿತ್ತು. ಇದೀಗ ರೈಲ್ವೆ ಪರೀಕ್ಷೆ ವಿವಾದ ಮುಜುಗರ ತರಿಸಿದೆ. ಸಿಇಟಿ ಪರೀಕ್ಷಾ ಪ್ರಕರಣದ ವಿರುದ್ಧ ಅಖಿಲ ಕರ್ನಾಟಕ ಬ್ರಾಹಣ ಮಹಾಸಭಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ನೋಟಿಸ್‌‍ ನೀಡಿದ್ದನ್ನು ಬಿಜೆಪಿ ಸಮರ್ಥಿಸಿತ್ತು.

ಈ ಬಗ್ಗೆ ವಿಶ್ವ ಹಿಂದೂ ಪರಿಷತ್‌ ಆಕ್ಷೇಪಿಸಿದ್ದು, ಈ ರೀತಿಯ ಆದೇಶ ಸರಿಯಲ್ಲ. ಇತ್ತೀಚಿಗೆ ಸಿಇಟಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಹಿಂದೂಗಳ ಪವಿತ್ರ ಜನಿವಾರವನ್ನು ಕಿತ್ತು ಹಾಕಿರುವುದು ಹಿಂದೂಗಳ ಭಾವನೆಗೆ ದಕ್ಕೆ ತಂದಿದೆ. ದೇಶಾದ್ಯಂತ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಮುತ್ತೈದೆ ಹೆಣ್ಣು ಮಗಳು ತಾಳಿ ಸರ ಕಳಚುವಂತೆ, ಸಿಂಧೂರ ಅಳಿಸುವಂತೆ ಮಾಡುವುದು, ಜನಿವಾರವನ್ನು ಕಿತ್ತು ಹಾಕುವಂತೆ ಹೇಳುವುದು ಕೋಟ್ಯಂತರ ಹಿಂದೂ ಧರ್ಮೀಯರ ಧಾರ್ಮಿಕ ಭಾವನೆಗೆ ನೋವು ತರುತ್ತದೆ.

ಹಿಂದೂ ಬಹುಸಂಖ್ಯಾತ ನಮ ದೇಶದಲ್ಲಿ ಈ ರೀತಿಯ ಹಿಂದೂ ವಿರೋಧಿ ಧೋರಣೆ ಸಹಿಸಲು ಅಸಾಧ್ಯ. ಹಾಗಾಗಿ ಪರೀಕ್ಷಾರ್ಥಿಗಳಿಗೆ ಯಾವುದೇ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡುತ್ತೇವೆ ಎಂದು ವಿಹಿಂಪ ಮಂಗಳೂರು ವಿಭಾಗ ಪ್ರಚಾರ ಪ್ರಮುಖ್‌ ಪ್ರದೀಪ್‌ ಸರಿಪಲ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Publisher: ಕನ್ನಡ ನಾಡು | Kannada Naadu

Login to Give your comment
Powered by