ಕನ್ನಡ ನಾಡು | Kannada Naadu

ಚಾಲಕ-ಕಂ-ನಿರ್ವಾಹಕ ಹುದ್ದೆಗೆ ವೃತ್ತಿ ಪರೀಕ್ಷೆ ಗೈರು ಹಾಜರಾದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ

06 May, 2025

 

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಹಾಸನ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆಯನ್ನು 2024ನೇ ಡಿಸೆಂಬರ್ 16 ರಿಂದ ನಡೆಸಲಾಗುತ್ತಿದ್ದು, ಈ ಸಂಬಂಧ ಎಲ್ಲಾ ಅಭ್ಯರ್ಥಿಗಳಿಗೆ ಕರೆಪತ್ರ ಡೌನ್-ಲೋಡ್ ಮಾಡಿಕೊಂಡು ನಿಗದಿತ ದಿನಾಂಕದಂದು ಹಾಜರಾಗಲು ಎಸ್.ಎಂ.ಎಸ್ ಸಂದೇಶ / ಪತ್ರಿಕಾ ಪ್ರಕಟಣೆ ಹಾಗೂ ನಿಗಮದ ಅಧಿಕೃತ ವೆಬ್‍ಸೈಟ್‍ನಲ್ಲಿ ಪ್ರಕಟಣೆ ನೀಡುವ ಮೂಲಕ ಮಾಹಿತಿಯನ್ನು ನೀಡಲಾಗಿತ್ತು.

ಆದರೆ, ಕೆಲವೊಂದು ಅಭ್ಯರ್ಥಿಗಳು ಗೈರುಹಾಜರಾಗಿರುವುದರಿಂದ ಅವರಿಗೆ ಮತ್ತೊಂದು ಅವಕಾಶ ನೀಡಲು ನಿರ್ಧರಿಸಿ 2025ನೇ ಮೇ 08 ರಿಂದ 20ರ ವರೆಗೆ ಚಾಲನಾ ವೃತ್ತಿ ಪರೀಕ್ಷೆಯನ್ನು ಮರು ನಿಗದಿಗೊಳಿಸಲಾಗಿದೆ.

ಗೈರುಹಾಜರಾದ ಅಭ್ಯರ್ಥಿಗಳು ಮತ್ತೊಮ್ಮೆ ನಿಗಮದ ಅಧಿಕೃತ ವೆಬ್‍ಸೈಟ್ www.ksrtcjobs.karnataka.gov.in ರಲ್ಲಿ ಕರೆಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ಕರೆಪತ್ರದಲ್ಲಿ ತಿಳಿಸಿರುವ ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಹಾಜರಾಗುವುದು.  

ಈ ಅವಕಾಶವು ಅಂತಿಮ ಅವಕಾಶವಾಗಿದ್ದು, ತದನಂತರದಲ್ಲಿ ಹಾಸನ ಚಾಲನಾ ಪಥದಲ್ಲಿ ಚಾಲನಾ ವೃತ್ತಿ ಪರೀಕ್ಷೆಗೆ ಅವಕಾಶ ನೀಡಲಾಗುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಆಯ್ಕೆ ಸಮಿತಿಯ ನಿರ್ದೇಶಕರು (ಸಿ&ಜಾ) ಹಾಗೂ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Publisher: ಕನ್ನಡ ನಾಡು | Kannada Naadu

Login to Give your comment
Powered by