CreamA Cream article
Article

ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಮಾಹಿತಿ ಹಕ್ಕು ಅಧಿನಿಯಮ ಜಾರಿ ಕೋಲಾರ ಜಿಲ್ಲೆಯಲ್ಲಿ ಮಾಹಿತಿ ಹಕ್ಕು ಕುರಿತು ಕಾರ್ಯಾಗಾರ

ಕನ್ನಡ ನಾಡು

ಬೆಂಗಳೂರು : ಕೋಲಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮೇ 17 ರಂದು ಬೆಳಿಗ್ಗೆ 11.00 ಗಂಟೆಯಿಂದ 1.00 ಗಂಟೆಯವರೆಗೆ ಮಾಹಿತಿ ಹಕ್ಕು ಅಧಿನಿಯಮದ ಬಗ್ಗೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ರಾಜ್ಯ ಮಾಹಿತಿ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಹಾಗೂ ರಾಜಶೇಖರ ಎಸ್. ರವರು ತರಬೇತಿ ಕಾರ್ಯಾಗಾರ ನಡೆಸಲಿದ್ದಾರೆ. ನಂತರ ಸಾರ್ವಜನಿಕರೊಂದಿಗೆ ಚರ್ಚೆ ನಡೆಯಲಿದೆ.

ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರುವುದು, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದು ಹಾಗೂ ಹೊಣೆಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ಸರ್ಕಾರ 2005 ರಲ್ಲಿ ಮಾಹಿತಿ ಹಕ್ಕು ಅಧಿನಿಯಮವನ್ನು ಜಾರಿಗೆ ತರಲಾಗಿದೆ.

ಮಾಹಿತಿ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿ ಅನುಷ್ಠಾನದ ಜವಾಬ್ದಾರಿ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಮೇಲಿದೆ. ಸಾರ್ವಜನಿಕರಿಗೆ ಸಕಾಲದಲ್ಲಿ ಮಾಹಿತಿ ಲಭ್ಯವಾಗುವಂತೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಗಮನ ಹರಿಸಬೇಕಾಗಿದೆ. ಈ ನಿಟ್ಟಿನಲ್ಲಿ ಮಾಹಿತಿ ಆಯೋಗ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಅರಿವು ಮೂಡಿಸಲು ಜಿಲ್ಲೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.  

Read More