ಬೆಂಗಳೂರು : ತರಕಾರಿ ಮತ್ತು ಇತರ ತ್ಯಾಜ್ಯ ಬಳಕೆ ಮಾಡಿ ಬಯೋ ಸಿಎನ್‌ಜಿ ಪ್ಲಾಂಟ್‌ಗಳ ಸ್ಥಾಪನೆಗೆ ಕೇಂದ್ರ ಸರ್ಕಾರದ ಕಾರ್ಬನ್ ಕ್ರೆಡಿಟ್ಸ್ ಅನುದಾನ ಬಳಕೆಯ ಬಗ್ಗೆ ದೆಹಲಿಯ ಕೊಸ್ಯಾಂಬೋ (ಕೌನ್ಸಿಲ್ ಆಫ್ ಸ್ಟೇಟ್ ಅಗ್ರಿಕಲ್ಚರ್ ಮಾರ್ಕೆಟಿಂಗ್ ಡಿಪಾರ್ಟ್ಮೆಂಟ್) ವ್ಯವಸ್ಥಾಪಕ ನಿರ್ದೇಶಕ ಡಾ. ಜೆ.ಎಸ್. ಯಾದವ್ ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಇಂದು ಭೇಟಿ ಮಾಡಿ ಚರ್ಚಿಸಿದರು.
ರಾಜ್ಯದಲ್ಲಿ ಬೆಂಗಳೂರಿನ ದಾಸನಪುರ, ಮೈಸೂರು ಮತ್ತು ಕೋಲಾರಗಳಲ್ಲಿ ಬಯೋ ಸಿಎನ್‌ಜಿ ಪ್ಲಾಂಟ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಸಚಿವ ಶಿವಾನಂದ ಪಾಟೀಲ ಅವರು ಡಾ. ಜೆ.ಎಸ್. ಯಾದವ್ ಅವರ ಗಮನಕ್ಕೆ ತಂದರು.
ತರಕಾರಿ ತ್ಯಾಜ್ಯ ಬಳಸಿ ಬಯೋ ಗ್ಯಾಸ್ ಉತ್ಪಾದನೆ ಮಾಡುವುದರಿಂದ ಪರಿಸರಕ್ಕೆ ವಿಷಕಾರಿ ಅನಿಲ ಸೇರ್ಪಡೆಯಾಗುವುದನ್ನು ತಡೆಗಟ್ಟಬಹುದು. ಘನ ತ್ಯಾಜ್ಯ ನಿರ್ವಹಣೆ ಕಾಯ್ದೆಗೆ ಕೇಂದ್ರ ಸರ್ಕಾರ ಅಕ್ಟೋಬರ್‌ನಲ್ಲಿ ತಿದ್ದುಪಡಿ ತರಲಿದೆ, ಈ ಮೂಲಕ ಲಭ್ಯವಾಗುವ ನೆರವನ್ನು ಬಳಕೆ ಮಾಡಿಕೊಳ್ಳಲಾಗಿದೆ ಎಪಿಎಂಸಿಗಳಲ್ಲಿ ಬಯೋ ಗ್ಯಾಸ್ ಪ್ಲಾಂಟ್‌ಗಳನ್ನು ನಿರ್ಮಾಣ ಮಾಡುವುದು ಸೂಕ್ತ ಎಂದು ಡಾ. ಜೆ.ಎಸ್. ಯಾದವ್ ಸಲಹೆ ಮಾಡಿದರು.
ಪ್ರತಿದಿನ 50 ಟನ್ ಉತ್ಪಾದನೆ ಮಾಡಿದರೆ ಮಾತ್ರ ಈ ಯೋಜನೆ ಲಾಭದಾಯಕ ವಸ್ತು. ಇದು ಲಾಭದಾಯಕ ಎಂದಾಗ ಮಾತ್ರ ಖಾಸಗಿಯವರೂ ಬಯೋ ಗ್ಯಾಸ್ ಪ್ಲಾಂಟ್ ನಿರ್ಮಿಸಲು ಮುಂದೆ ಬರುತ್ತಾರೆ. ರಾಜ್ಯದ ಯಾವ ಎಪಿಎಂಸಿಗಳಲ್ಲಿ ಪ್ರತಿದಿನ ಎಷ್ಟು ತ್ಯಾಜ್ಯ ಉತ್ಪಾದನೆಯಾಗುತ್ತದೆ. ಎಲ್ಲೆಲ್ಲಿ ಬಯೋಗ್ಯಾಸ್ ಪ್ಲಾಂಟ್ ನಿರ್ಮಿಸಿದರೆ ಲಾಭದಾಯಕ ಎಂದು ಗುರುತಿಸಿ ಯೋಜನೆ ರೂಪಿಸುವುದು ಸೂಕ್ತ ಎಂಬ ಅಭಿಪ್ರಾಯಕ್ಕೆ ಬರಲಾಗಿದೆ.
ಅತಿ ಹೆಚ್ಚು ತ್ಯಾಜ್ಯ ಉತ್ಪಾದನೆಯಾಗುವ ಬೆಂಗಳೂರು, ಮೈಸೂರು ಮತ್ತು ಕೋಲಾರಗಳಲ್ಲಿ ಸ್ಥಾಪನೆ ಮಾಡುವುದು ಸೂಕ್ತ ಎಂಬ ಸಲಹೆ ವ್ಯಕ್ತವಾಯಿತು.
ಹಣ್ಣುಗಳು ಹಾನಿಕಾರಕ ರಾಸಾಯನಿಕ ಬಳಕೆ, ಸೇಬು ಸೇರಿದಂತೆ ಇತರ ಹಲವು ಹಣ್ಣುಗಳ ಬ್ರಾಂಡ್‌ಗಳನ್ನು ಅವುಗಳ ಮೇಲೆ ಗುರುತಿಸಲಾಗಿದೆ ಸ್ಟಿಕ್ಕರ್ಗಳನ್ನು ಹಚ್ಚುವುದು ಅಪಾಯಕಾರಿ. ಇಂತಹ ಹಣ್ಣುಗಳ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ, ಈ ಬಗ್ಗೆ ವರ್ತಮಾನದಲ್ಲಿ ಜಾಗೃತಿ ಮೂಡಿಸಬೇಕು ಚರ್ಚೆ ನಡೆಯಿತು.
ಆಹಾರ ಸುರಕ್ಷತೆ ಕಾಯ್ದೆಯಲ್ಲಿ ಈ ಎಲ್ಲ ಅಂಶಗಳು ಬರುತ್ತವೆ. ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಅಂಶಗಳ ಬಗ್ಗೆ ಉಲ್ಲೇಖಿಸಲಾಗಿದೆ. ಈ ನಿಯಮಗಳು ಪಾಲನೆ ಮಾಡಲು ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಕಲ್ಲಂಗಡಿ, ಬೆಂಡೆಕಾಯಿ, ಕ್ಯಾರೆಟ್ ಸೇರಿದಂತೆ ಕೆಲವು ಹಣ್ಣುಗಳು, ತರಕಾರಿಗಳಿಗೆ ಕೃತಕ ಬಣ್ಣವನ್ನು ಬಳಸಲಾಗುತ್ತಿದೆ. ಗರಿಷ್ಠ ಪ್ರಮಾಣದಲ್ಲಿ ಕೀಟನಾಶಕ ಬಳಸುವುದೂ ಕೂಡ ಅಪಾಯಕಾರಿ. ಆದ್ದರಿಂದ ತರಕಾರಿಗಳಿಗೆ ಕೃತಕ ಬಣ್ಣವನ್ನು ಬಳಸುವುದರಿಂದ ಮತ್ತು ಸಾಧ್ಯವಾದಷ್ಟು ಕಡಿಮೆ ಪ್ರಮಾಣದಲ್ಲಿ ಕೀಟನಾಶಕಗಳನ್ನು ಬಳಸುವ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಇಲ್ಲವಾದರೆ ಭವಿಷ್ಯದ ದಿನಗಳಲ್ಲಿ ಆರೋಗ್ಯದ ಮೇಲೆ ಗರಿಷ್ಠ ಪ್ರಮಾಣದಲ್ಲಿ ದುಷ್ಪರಿಣಾಮ ಬೀರಲಿದೆ ಎಂಬ ಅಂಶಗಳ ಬಗ್ಗೆ ಕೂಡ ಚರ್ಚೆ.
ತೋಟಗಾರಿಕೆ, ಪುμÉ್ಪೂೀದ್ಯಮ ಮತ್ತು ಹೈನುಗಾರಿಕೆ ಉದ್ಯಮದಲ್ಲಿ ಕರ್ನಾಟಕ ರಾಜ್ಯ ಮಂಚೂಣಿಯಲ್ಲಿದೆ ಎಂದು ಸಚಿವ ಶಿವಾನಂದ ಪಾಟೀಲ ಅವರು ಜೆ.ಎಸ್.ಯಾದವ್ ಅವರ ಗಮನಕ್ಕೆ ತಂದರು.
ಈ ಸಮಯದಲ್ಲಿ ಕೃಷಿ ಇಲಾಖೆ ನಿರ್ದೇಶಕ ಶಿವಾನಂದ ಕಾಪಸೆ, ಅಧೀಕ್ಷಕ ಅಭಿಯಂತರ ರಘುನಂದನ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ರವಿಪ್ರಕಾಶ್, ಕರ್ನಾಟಕ ಕೃಷಿ ಮಾರಾಟ ಮಹಾ ಮಂಡಲದ ಮುಖ್ಯ ಪ್ರಧಾನ ವ್ಯವಸ್ಥಾಪಕ ಚಂದ್ರಕಾಂತ್ ಪಾಟೀಲ. .
Publisher: ಕನ್ನಡ ನಾಡು | Kannada Naadu