ಬೆಳಗಾವಿ : ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುತ್ತಿದೆ.
ಕಳೆದ ರಾತ್ರಿಯಿಂದಲೇ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಶಾಲಾ ಮಕ್ಕಳು ಶಾಲೆಗೆ ತೆರಳಲು ತೀವ್ರ ಪರದಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ನಗರದ ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ. ರಸ್ತೆಗಳೂ ಕೆಲವೆಡೆ ಜಲಾವೃತವಾಗಿವೆ. ಜಿಲ್ಲೆಯ ಅನೇಕ ನದಿಗಳು ತುಂಬಿ ಹರಿಯುತ್ತಿದ್ದು, ಅಧಿಕಾರಿಗಳು ನಿರಂತರ ನಿಗಾವಹಿಸಿದ್ದಾರೆ.
Publisher: ಕನ್ನಡ ನಾಡು | Kannada Naadu