ಕನ್ನಡ ನಾಡು | Kannada Naadu

ವ್ಯಾಪಕ ಮಳೆ ಹಿನ್ನೆಲೆ ನಾಳೆ ಬೆಳಗಾವಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

24 Jun, 2025

ಬೆಳಗಾವಿ: ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕುಗಳಾದ್ಯಂತ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12 ನೇ ತರಗತಿವರೆಗೆ) ಮತ್ತು ಅಂಗನವಾಡಿಗಳಿಗೆ ಮುಂಜಾಗೃತ ಕ್ರಮವಾಗಿ ನಾಳೆ ಬುಧವಾರ ರಜೆ ಘೋಷಿಸಿ ಆದೇಶಿಸಿದೆ.

ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ನಾಳೆ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ಹಾಗಾಗಿ ಮಕ್ಕಳ ಹಿತದೃಷ್ಟಿಯಿಂದ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕುಗಳಾದ್ಯಂತ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಬುಧವಾರ ರಜೆ ಘೋಷಿಸುವ ಕುರಿತು ಆದೇಶ ಮಾಡಲಾಗಿದೆ.

ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ ಉಪನಿರ್ದೇಶಕರು, ಪದವಿಪೂರ್ವ ಶಿಕ್ಷಣ ಇಲಾಖೆ ಬೆಳಗಾವಿ ಹಾಗೂ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಳಗಾವಿ ರವರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕ ಮಾಡಿಕೊಳ್ಳಲು ಸೂಚಿಸಲಾಗಿದೆ.

Publisher: ಕನ್ನಡ ನಾಡು | Kannada Naadu

Login to Give your comment
Powered by