ಕನ್ನಡದಲ್ಲಿ ಬರುವ ಅರ್ಜಿ ಮತ್ತು ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಲು ಸೂಚನೆ
ಬೆಂಗಳೂರು : ಕರ್ನಾಟಕ ರಾಜ್ಯದ ಆಡಳಿತ ಭಾμÉಯಾಗಿ ಕನ್ನಡ ಇರತಕ್ಕದ್ದೆಂದು ಕರ್ನಾಟಕ ರಾಜ್ಯ ಭಾμÁ ಅಧಿನಿಯಮ 1963ರಲ್ಲಿ ತಿಳಿಸಲಾಗಿದೆ. ಕನ್ನಡದಲ್ಲಿ ಬರುವ ಅರ್ಜಿ ಮತ್ತು ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ಸರ್ಕಾರಿ ಕಛೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೂಚಿಸಿದ್ದಾರೆ.
ವಿಧಾನ ಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನ ಸೆಳೆಯುವ ಸೂಚನೆ ಇತ್ಯಾದಿಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಸಲ್ಲಿಸಲು ತಿಳಿಸಲಾಗಿದೆ. ನೇಮಕಾತಿ, ವರ್ಗಾವಣೆ ಮತ್ತು ರಜೆ ಮಂಜೂರಾತಿ ಇತರೆ ಎಲ್ಲಾ ಸರ್ಕಾರದ ಆದೇಶಗಳನ್ನು ಕನ್ನಡದಲ್ಲಿ ಹೊರಡಿಸಲು ಸ್ಪಷ್ಟವಾಗಿ ಸೂಚನೆಗಳನ್ನು ನೀಡಲಾಗಿದೆ. ಕಛೇರಿಗಳಿಗೆ ಒದಗಿಸಿರುವ ಆಂಗ್ಲ ಭಾμÁ ನಮೂನೆ, ದಾಖಲೆ ಪುಸ್ತಕ ಮುಂತಾದವುಗಳನ್ನು ಕನ್ನಡದಲ್ಲಿ ಭರ್ತಿ ಮಾಡುವಂತೆ, ಆಂತರಿಕ ಪತ್ರ ವ್ಯವಹಾರ, ಕಡತದ ಟಿಪ್ಪಣಿ ಕನ್ನಡದಲ್ಲಿಯೇ ಇರುವಂತೆ ತಿಳಿಸಲಾಗಿದೆ. ಅಲ್ಲದೆ ಸಭಾ ಸೂಚನೆ, ಕಾರ್ಯಸೂಚಿ, ಸಂಕ್ಷಿಪ್ತ ಟಿಪ್ಪಣಿ ಹಾಗೂ ನಡವಳಿಗಳನ್ನು ಕನ್ನಡದಲ್ಲಿ ತಯಾರಿಸಿ ಸರ್ಕಾರದ ಭಾμÁ ನೀತಿಯನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರುವಂತೆ ಈಗಾಗಲೇ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಕೇಂದ್ರ ಸರ್ಕಾರ, ಹೊರ ರಾಜ್ಯಗಳು ಮತ್ತು ನ್ಯಾಯಾಲಯಗಳ ಪತ್ರ ವ್ಯವಹಾರಗಳನ್ನು ಹೊರತುಪಡಿಸಿ, ಉಳಿದೆಲ್ಲಾ ಪತ್ರ ವ್ಯವಹಾರಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಇರುವಂತೆ ಸೂಚಿಸಲಾಗಿದೆ.
ಸರ್ಕಾರಿ ಪತ್ರ ವ್ಯವಹಾರಗಳಲ್ಲಿ ಕಡತದ ಟಿಪ್ಪಣಿಗಳನ್ನು ಕನ್ನಡದಲ್ಲಿ ಮಾಡುವಂತೆ ಸೂಚಿಸಿದ್ದರೂ ಪರಿಣಾಮಕಾರಿಯಾಗಿ ಅನುμÁ್ಠನಗೊಳಿಸದಿರುವುದನ್ನು ಗಮನಿಸಿದ ಸನ್ಮಾನ್ಯ ಮುಖ್ಯಮಂತ್ರಿಯವರು ಕಡತದಲ್ಲಿನ ಟಿಪ್ಪಣಿ ಮತ್ತು ಪತ್ರ ವ್ಯವಹಾರಗಳು ಕನ್ನಡದಲ್ಲಿ ಬಾರದಿದ್ದ ಪಕ್ಷದಲ್ಲಿ ಅಂತಹ ಕಡತಗಳನ್ನು ಹಿಂದಿರುಗಿಸಿ ಸೂಕ್ತ ಸಮಜಾಯಿಷಿ ಪಡೆಯಲು ನಿರ್ದೇಶನ ನೀಡಿರುತ್ತಾರೆ. ಆಡಳಿತದಲ್ಲಿ ಭಾμÁ ನೀತಿಯನ್ನು ಪೂರ್ಣ ಪ್ರಮಾಣದಲ್ಲಿ ಹಾಗೂ ಎಲ್ಲಾ ಹಂತಗಳಲ್ಲಿ ಜಾರಿಗೊಳಿಸುವುದು ಎಲ್ಲ ಅಧಿಕಾರಿಗಳ ನೌಕರರ ಕರ್ತವ್ಯವಾಗಿದೆ. ಆದುದರಿಂದ ಈಗಾಗಲೇ ಹೊರಡಿಸಿರುವ ಸರ್ಕಾರಿ ಆದೇಶಗಳಲ್ಲಿ ನೀಡಿರುವ ಸೂಚನೆಗಳನ್ನು ಸರಕಾರ / ನಿಗಮ / ಮಂಡಳಿ / ಸ್ಥಳೀಯ ಸಂಸ್ಥೆಗಳ / ವಿಶ್ವವಿದ್ಯಾಲಯಗಳ/ ಅನುದಾನಿತ ಸಂಘ-ಸಂಸ್ಥೆಗಳ ಎಲ್ಲಾ ಅಧಿಕಾರಿ/ ನೌಕರರು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಮತ್ತೊಮ್ಮೆ ಪುನರುಚ್ಛರಿಸಲಾಗಿದೆ.
ಇತ್ತೀಚೆಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕೆ.ಡಿ.ಪಿ. ಸಭೆಯ ಕಾರ್ಯಸೂಚಿಯನ್ನು ಆಂಗ್ಲ ಭಾμÉಯಲ್ಲಿ ಹೊರಡಿಸಿರುತ್ತಾರೆಂದು ಹಾಗೂ ವಿಶೇಷವಾಗಿ ಕಾಮಗಾರಿ ಇಲಾಖೆಗಳು ತಮ್ಮೆಲ್ಲ ಮಾಹಿತಿಗಳನ್ನು ಆಂಗ್ಲ ಭಾμÉಯಲ್ಲಿ ಮಂಡಿಸುತ್ತಿದ್ದು ಇದನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಅನುಮೋದಿಸುತ್ತಿದ್ದಾರೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ವರದಿ ಮಾಡಿದ್ದಾರೆ.
ಕನ್ನಡ ಭಾμÉಯಲ್ಲಿಯೇ ಆಡಳಿತ ನಡೆಸುವ ಬಗ್ಗೆ ಈಗಾಗಲೇ ಹಲವಾರು ಬಾರಿ ಸೂಚನೆಗಳನ್ನು ನೀಡಿ ಸುತ್ತೋಲೆಗಳನ್ನು ಹೊರಡಿಸಿದ್ದರೂ ಸಹ ಪಾಲನೆಯಾಗದೇ ಇರುವ ಬಗ್ಗೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ವರದಿ ಮಾಡುತ್ತಲೇ ಬಂದಿದೆ. ಈ ಹಿನ್ನೆಲೆಯಲ್ಲಿ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. ಸದರಿ ಸೂಚನೆಗಳನ್ನು ಉಲ್ಲಂಘಿಸಿದವರ ವಿರುದ್ಧ ವೈಯಕ್ತಿಕವಾಗಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ.
Publisher: ಕನ್ನಡ ನಾಡು | Kannada Naadu