ಕನ್ನಡ ನಾಡು | Kannada Naadu

ಮಳೆ ಅಬ್ಬರಕ್ಕೆ ಐದು ಜಿಲ್ಲೆಯಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ.

26 Jun, 2025

ಬೆಳಗಾವಿ: ಬೆಳಗಾವಿ, ಕೊಡಗು, ದಕ್ಷಿಣ ಕನ್ನಡ, ಹಾಸನ, ಹಾಗೂ ಚಿಕ್ಕಮಗಳುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಸಾರ್ವಜನಿಕರ ಓಡಾಟವೇ ವಿರಳವಾಗಿದೆ. ಹೀಗಾಗಿಯೇ ಜಿಲ್ಲಾಧಿಕಾರಿಗಳು ಶಾಲಾ ಕಾಲೇಜುಗಳಿಗೆ ರಜೆ ನೀಡಿ ಆದೇಶಿಸಿದ್ದಾರೆ.

ಬೆಳಗಾವಿ, ಖಾನಾಪುರ ಹಾಗೂ ಕಿತ್ತೂರು ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ.

ಹಾಗೆಯೇ ಕೊಡಗಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಇವತ್ತು ರಜೆ ಘೋಷಣೆಯಾಗಿದೆ. ಕೊಡಗಿನ ಬಹುತೇಕ ಕಡೆ ರಣ ಮಳೆ ಭೀತಿ ಸೃಷ್ಟಿಸಿದ್ದು ವಿರಾಜಪೇಟೆಯಲ್ಲಿ ನಿರಂತರ ಮಳೆಯೊಂದಿಗೆ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಕಂಬಗಳು ಧರೆಗೆ ಉರುಳಿ ಗ್ರಾಮಗಳು ಕತ್ತಲೆಯಲ್ಲಿ ಮುಳುಗಿದೆ.

ಮತ್ತೊಂದೆಡೆ, ಪಶ್ಚಿಮ ಘಟ್ಟದಲ್ಲಿ ಹಾಗೂ ಬೆಳ್ತಂಗಡಿ ತಾಲ್ಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಗುರುವಾರವೂ ಮುಂದುವರಿಯುವ ಮುನ್ಸೂಚನೆ ಇರೋ ಕಾರಣ ತಾಲ್ಲೂಕಿನ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇವತ್ತು ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.

ಹಾಸನ ಜಿಲ್ಲೆಯಲ್ಲೂ ಪ್ರೌಢ ಶಾಲೆವರೆಗೆ ರಜೆ ಘೋಷಣೆ ಮಾಡಿ ಡಿಸಿ ಆದೇಶಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ ಕೊಪ್ಪ, NR ಪುರ ತಾಲೂಕಿನಲ್ಲಿ ಪ್ರೌಢ ಶಾಲೆವರೆಗೆ ಗುರುವಾರ ರಜೆ ನೀಡಲಾಗಿದೆ.

Publisher: ಕನ್ನಡ ನಾಡು | Kannada Naadu

Login to Give your comment
Powered by