ಕನ್ನಡ ನಾಡು | Kannada Naadu

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ - ಮುಖ್ಯಮಂತ್ರಿ ಸಿದ್ದರಾಮಯ್ಯ

27 Jun, 2025

 

ಬೆಂಗಳೂರು : ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು  ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.

ಇಂದು  ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿ ಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18 ರ ಅವಧಿಯಲ್ಲಿ ನಮ್ಮ  ಸರ್ಕಾರ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚೆ ಮಾಡಿ ಜನ್ಮದಿನಾಂಕವನ್ನು ತಿಳಿದು, ಅಂದಿನಿಂದ ನಿರಂತರವಾಗಿ ಸರ್ಕಾರ ಕೆಂಪೇಗೌಡ  ಜಯಂತಿಯನ್ನು ಆಚರಣೆ ಮಾಡುತ್ತಿದೆ.  ಬೆಂಗಳೂರು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು ಎಂದರು

ಅವರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬೆಂಗಳೂರಿನ ನಾಲ್ಕು ಭಾಗದಲ್ಲಿ ಗೋಪುರಗಳನ್ನು ಕಟ್ಟಿಸಿದ ಕೆಂಪೇಗೌಡರು  ಅಂದೇ ಬೆಂಗಳೂರಿನ ಆಡಳಿತ ಹೇಗಿರಬೇಕೆಂದು ಅರಿತು ವೃತ್ತಿ ಆಧಾರಿತವಾಗಿ  ನಗರತ್ ಪೇಟೆ, ಚಿಕ್ಕಪೇಟೆ, ಬಳೆಪೇಟೆ ಸೇರಿದಂತೆ ಅನೇಕ ಪೇಟೆಗಳನ್ನು ತಮ್ಮ ಆಡಳಿತಾವಧಿಯಲ್ಲಿ ನಿರ್ಮಿಸಿದ್ದರು. ಅವರ ಆಡಳಿತ ನಮಗೆಲ್ಲರಿಗೂ ಮಾದರಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬೆಂಗಳೂರು ಅಭಿವೃದ್ಧಿಗೊಳಿಸುವ ಕನಸನ್ನು ಸರ್ಕಾರ ನನಸು ಮಾಡಲಿದೆ :
ಬೆಂಗಳೂರು ಅಭಿವೃದ್ಧಿ ಮಾಡುವ ಕನಸನ್ನು ನನಸು ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಸುಮನಹಳ್ಳಿಯ ಜಗಜೀವನ್ ರಾಮ್ ನಗರದಲ್ಲಿ  ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಮಾನ ನಿಲ್ದಾಣದ ಬಳಿ ಇರುವ ಕೆಂಪೇಗೌಡರ ಪ್ರತಿಮೆಗೆ  ಮಾಲಾರ್ಪಣೆ ಮಾಡಿದ್ದಾರೆ ಎಂದು ತಿಳಿಸಿದರು.

ಹುಲಿಗಳ ಸಾವು: ತನಿಖಾ ವರದಿಯ ನಂತರ ಕ್ರಮ:

ಚಾಮರಾಜನಗರದಲ್ಲಿ ಐದು ಹುಲಿಗಳು ಸಾವಿಗೀಡಾಗಿದ್ದು ಈ ಬಗ್ಗೆ ತನಿಖೆ ಕೈಗೊಳ್ಳಲು ಆದೇಶಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಮಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್.ತಂಗಡಗಿ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ ನಿಯಮಿತ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

Publisher: ಕನ್ನಡ ನಾಡು | Kannada Naadu

Login to Give your comment
Powered by