ಮಹತ್ವದ ಬೆಳವಣಿಗೆಯಲ್ಲಿ ಕೆ.ಎನ್.ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಹೈಕಮಾಂಡ್ ನಾಯಕರ ಸೂಚನೆ ಮೇರೆಗೆ ಕೆ.ಎನ್.ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ತಮ್ಮ ರಾಜೀನಾಮೆ ಪತ್ರವನ್ನು ಪಿಎಸ್ ಡಾ. ವೆಂಕಟೇಶಯ್ಯ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಕೆ.ಎನ್.ರಾಜಣ್ಣ ರಾಜೀನಾಮೆ ಅಂಗೀಕರಿಸಿದ್ದಾರೆ. ಶೀಘದಲ್ಲೇ ರಾಜಣ್ಣ ರಾಜೀನಾಮೆ ಪತ್ರ ಅಂಗೀರವನ್ನು ರಾಜ್ಯಪಾಲರಿಗೆ ಸಿಎಂ ರವಾನಿಸಲಿದ್ದಾರೆ.
ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಕೆ.ಎನ್.ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ರಾಜಣ್ಣ ನಡೆ ತೀವ್ರ ಕುತೂಹಲ ಮೂಡಿಸಿದೆ.
ಲೋಕಸಭಾ ಚುನಾವಣೆ ವೇಳೆ ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಮತಗಳ್ಳತನ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಇದೇ ಸಂದರ್ಭದಲ್ಲಿ ಸಚಿವ ರಾಜಣ್ಣ, ಲೋಕಸಭಾ ಚುನಾವಣೆಯ ವೇಳೆ ನಾವೇ ಅಧಿಕಾರದಲ್ಲಿ ಇದ್ವಿ. ಮಹದೇವಪುರದಲ್ಲಿ ನಮ್ಮ ಲೋಪವಿದೆ ಎಂದು ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆಯೇ ರಾಜಣ್ಣಗೆ ಮುಳುವಾಗಿದೆ ಎನ್ನಲಾಗುತ್ತಿದೆ. ಇದರ ಬೆನ್ನಲ್ಲೇ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯಗೆ ರಾಜಣ್ಣ ರಾಜೀನಾಮೆ ಪಡೆಯಲು ಸೂಚಿಸಿದ್ದಾರೆ ಎನ್ನಲಾಗಿದೆ
Publisher: ಕನ್ನಡ ನಾಡು | Kannada Naadu