ಕನ್ನಡ ನಾಡು | Kannada Naadu

ನನ್ನ ವಜಾ ಹಿಂದೆ ಷಡ್ಯಂತ್ರ ನಡೆದಿದೆ; ಇದರ ಹಿಂದೆ ಯಾರಿದ್ದಾರೆಂದು ಗೊತ್ತು: ರಾಜಣ್ಣ ಮೊದಲ ಪ್ರತಿಕ್ರಿಯೆ

12 Aug, 2025

ನನ್ನನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದರ ಹಿಂದೆ ಪಿತೂರಿ ನಡೆದಿದೆ. ಇದರ ಹಿಂದೆ ಯಾರಿದ್ದಾರೆ ಎಂದು ಗೊತ್ತಿದೆ ಎಂದು ಕೆ.ಎನ್.ರಾಜಣ್ಣ ಹೇಳಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಡಿದ ರಾಜಣ್ಣ, ನನ್ನ ವಜಾ ಹಿಂದೆ ಷಡ್ಯಂತ್ರ ನಡೆದಿದೆ. ಇದರ ಹಿಂದೆ ಯಾರಿದ್ದಾರೆ ಎಲ್ಲವೂ ಗೊತ್ತಿದೆ. ಕಾಲ ಬಂದಾಗ ತಿಳಿಸುತ್ತೇನೆ ಎಂದರು.

ನಾನು ಮಾಜಿ ಸಚಿವನಾಗಿ ಮಾತನಾಡುತ್ತಿದ್ದೇನೆ. ಮಾಜಿ ಸಚಿವ ಎಂದು ಕರೆಸಿಕೊಳ್ಳಲು ಸಂತೋಷವಾಗುತ್ತಿದೆ. ಮಂತ್ರಿಯಾಗಲು ಸಿದ್ದರಾಮಯ್ಯನವರು ಅವಕಾಶ ಕೊಟ್ಟಿದ್ದರು. ಇಲ್ಲಿಯವರೆಗೆ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ ತಿಳಿಸಲು ಅವರನ್ನು ಭೇಟಿಯಾಗಿದ್ದೆ. ವಜಾಗೊಳಿಸಿದ ನಿರ್ಧಾರ ಪ್ರಕಟವಾದ ಬಳಿಕ ಮುಖ್ಯಮಂತ್ರಿಗಳು ಮಾತನಾಡಬಹುದು ಎಂದು ಭಾವಿಸಿದ್ದೆ. ಅವರು ಪ್ರತಿಕ್ರಿಯೆ ನೀಡದ ಕಾರಣ ನಾನು ಮಾತನಾಡಬೇಕು ಎಂದುಕೊಂಡಿದ್ದೆ. ಆದರೆ ಅವರು ಯಾವುದೇ ಪ್ರತಿಕ್ರಿಯೆ ನೀಡದ ಕಾರಣ ಈಗ ನಾನೇ ಮಾತನಾಡುತ್ತಿದ್ದೇನೆ ಎಂದರು.

ರಾಹುಲ್ ಗಾಂಧಿ, ವೇಣುಗೋಪಾಲ್ ಅವರಿಗೆ ನನ್ನ ಬಗ್ಗೆ ತಪ್ಪುಗ್ರಹಿಕೆಯಾಗಿದೆ. ತಪ್ಪು ಗ್ರಹಿಕೆ ಸರಿಪಡಿಸುವ ಕಾರ್ಯ ಮಾಡುತ್ತೇನೆ. ಹೀಗಾಗಿ ಮನವರಿಕೆ ಮಾಡಿಸಲು ದೆಹಲಿಗೆ ಹೋಗುತ್ತೇನೆ ಎಂದರು.

Publisher: ಕನ್ನಡ ನಾಡು | Kannada Naadu

Login to Give your comment
Powered by