ಕನ್ನಡ ನಾಡು | Kannada Naadu

ಸಮಾಜದ ಎಲ್ಲಾ ಸಾರ್ವಜನಿಕರು ಸಂವಿಧಾನ ರಕ್ಷಣೆ ಮಾಡಲು ಬದ್ಧರಾಗಿರಬೇಕು ಸಂವಿಧಾನ ಉಳಿದರೆ ನಮ್ಮ ರಕ್ಷಣೆಯಾಗುತ್ತದೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನ ಮಾಡದಿರಲು ಸಾರ್ವಜನಿಕರಿಗೆ ಕರೆ

15 Sep, 2025

ಬೆಂಗಳೂರು :

ನಮ್ಮ ಸಮಾಜದ ಎಲ್ಲಾ ಸಾರ್ವಜನಿಕರು ಸಂವಿಧಾನ ರಕ್ಷಣೆ ಮಾಡಲು ಬದ್ಧರಾಗಿರಬೇಕು. ಸಂವಿಧಾನ ಉಳಿದರೆ ನಮ್ಮ ರಕ್ಷಣೆಯಾಗುತ್ತದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರ್ನಾಟಕ ಸರ್ಕಾರ ಮತ್ತು ಸಮಾಜಕಲ್ಯಾಣ ಇಲಾಖೆಯ ಸಮನ್ವಯದೊಂದಿಗೆ ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದ್ದ “ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ” ಕಾರ್ಯಕ್ರಮಕ್ಕೆ ನಗಾರಿ ಬಾರಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಯಾವ ಸಮಾಜದಲ್ಲಿ ಭಿನ್ನಾಭಿಪ್ರಾಯಗಳನ್ನು ಕೇಳುವ ವ್ಯವಸ್ಥೆ ಇದೆಯೊ ಅಲ್ಲಿ ಪ್ರಜಾಪ್ರಭುತ್ವ ಬೆಳೆದಿದೆ ಎಂದರು.

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಾದ ಇಂದು “ನನ್ನ ಮತ ನನ್ನ ಹಕ್ಕು” ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಪಟ್ಟಭಧ್ರಾ ಹಿತಾಶಕ್ತಿಗಳಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ದುರ್ಬಲಗೊಳಿಸುವ ಪಿತೂರಿ ನಡೆಯುತ್ತಿದೆ. ಇದನ್ನು ಅರಿತಿರುವ ಸರ್ಕಾರ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆಯನ್ನು ಓದಿಸಲಾಗುತ್ತಿದೆ. ಸಂವಿಧಾನ ಪೀಠಿಕೆಯಲ್ಲಿ ಎಲ್ಲಾ ಸಾರಾಂಶ ಅಡಕವಾಗಿರುವುದರಿಂದ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜು ದಿನಗಳಿಂದಲೇ ಸಂವಿಧಾನದ ಮಹತ್ವದ ಅರಿವು ಉಂಟಾಗುತ್ತದೆ. ಸಂವಿಧಾನವನ್ನು ಅನೇಕರು ತಿಳಿದುಕೊಂಡಿಲ್ಲ. ಸಂವಿಧಾನವನ್ನು ತಿಳಿದುಕೊಂಡರೆ ಯಾರನ್ನೂ ದುರ್ಬಲಗೊಳಿಸಲು ಸಾಧ್ಯವಿಲ್ಲ ಎಂದರು.

ಚುನಾವಣೆಯಲ್ಲಿ ಮತಗಳ್ಳತನ ಶುರುವಾಗಿದೆ. ಮತ ಕಳ್ಳತನವಾಗಲು ಬಿಡಬಾರದು. ಸಂವಿಧಾನವನ್ನು ದುರ್ಬವಾಗಲು ಬಿಡಬಾರದು.  ಎಚ್ಚರಿಕೆಯಿಂದ ಇದ್ದರೆ ನಮ್ಮ ಹಕ್ಕುಗಳನ್ನು ಚಲಾಯಿಸಲು ಸಾಧ್ಯವಾಗುತ್ತದೆ.  ಪ್ರಜಾಪ್ರಭುತ್ವ ಯಾವುದೇ ಒಂದು ಜಾತಿ, ಒಂದು ಧರ್ಮಕ್ಕೆ ಸೀಮಿತವಾಗಿಲ್ಲ. ಎಲ್ಲಾ ಜಾತಿ, ಧರ್ಮ, ಮಹಿಳೆಯರನ್ನು ಗೌರವದಿಂದ ಕಾಣುವ ವ್ಯವಸ್ಥೆ ಪ್ರಜಾಪ್ರಭುತ್ವದಲ್ಲಿದೆ. ಅಸಮಾನತೆ ನಿವಾರಣೆಯಾದರೆ, ಶೋಷಣೆ ಮಾಡಲು ಸಾಧ್ಯವಿಲ್ಲ.  ಜಾತಿ-ಧರ್ಮ ಬೇಧ ಮಾಡದೆ ಸಹಿಷ್ಣುತೆ ಬೆಳೆಸಿಕೊಳ್ಳಿ ಎಂದು ಸಂವಿಧಾನ ಹೇಳಿದೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಜನರನ್ನು ತಪ್ಪು ದಾರಿಗೆ ಎಳೆಯಬಾರದು.  ಪ್ರತಿಯೊಬ್ಬರು ಆಥಿರ್üಕವಾಗಿ, ಸಾಮಾಜಿಕವಾಗಿ ಸದೃಢರಾಗಬೇಕು ಎಂದರು.

ನಮ್ಮ ರಾಜ್ಯದಲ್ಲಿ ಅಸಮಾನತೆ ಹೋಗಲಾಡಿಸಲು ಅನೇಕ ಭಾಗ್ಯ ಮತ್ತು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಗ್ಯಾರಂಟಿ ಯೋಜನೆಗಳಿಗೆ ಇದುವರೆಗೆ ಸುಮಾರು 98 ಸಾವಿರ ಕೋಟಿ ರೂ. ಗಳನ್ನು ವೆಚ್ಚ ಮಾಡಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಪ್ರಜಾಪ್ರಭುತ್ವದಲ್ಲಿ “ನನ್ನ ಮತ ನನ್ನ ಹಕ್ಕು” ಕುರಿತ ಚಿತ್ರಕಲಾ ಸ್ಪರ್ಧೆ, ಛಾಯಾಚಿತ್ರ ಸ್ಪರ್ಧೆ ಹಾಗೂ ಚರ್ಚಾ ಸ್ಪರ್ಧೆಗೆ ಚಾಲನೆ ನೀಡಿದರು. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ನಿರುದ್ಯೋಗಿಗಳಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಉದ್ಯಮವನ್ನು ಸ್ಥಾಪಿಸಲು 23 ಫಲಾನುಭವಿಗಳಿಗೆ ತಲಾ 5 ಲಕ್ಷ ರೂ.ಗಳ ಸಹಾಯಧನ ನೀಡಿದರು. 2025ನೇ ಸಾಲಿನಲ್ಲಿ ವೈದ್ಯಕೀಯ ಐಐಟಿ, ಐಐಐಟಿ, ಎನ್‍ಐಟಿ ಮತ್ತು ಇಂಜಿನಿಯರಿಂಗ್ ವೃತ್ತಿಪರ ಕೋರ್ಸ್‍ಗಳಿಗೆÀ ಉತ್ತಮ ಅಂಕ ಪಡೆದು ಆಯ್ಕೆಯಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಿದರು.

ವಿದ್ಯಾರ್ಥಿ ದಿಸೆಯಿಂದಲೇ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು - ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 2025 ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ಜಾಲತಾಣಕ್ಕೆ ಚಾಲನೆ ನೀಡಿ ಮಾತನಾಡುತ್ತಾ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ.  ಬಸವಣ್ಣನವರ ನಾಡಿನಲ್ಲಿ ನಾವು ಇದ್ದೇವೆ. ಸರ್ವರಿಗೂ ಸಮ ಬಾಳು, ಸರ್ವರಿಗೂ ಸಮಪಾಲು ಎಂಬ ಘೋಷಣೆಯೊಂದಿಗೆ ಬದುಕುತ್ತಿದ್ದೇವೆ. ಮತದಾನದ ಮೌಲ್ಯದ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಹೊಸ ಪೀಳಿಗೆಗೆ ಈ ವಿಚಾರದ ಬಗ್ಗೆ ಅರಿವು ಮೂಡಿಸಬೇಕು. ವಿದ್ಯಾರ್ಥಿ ದಿಸೆಯಿಂದಲೇ ನಾಯಕತ್ವ ಬೆಳೆಸಿಕೊಳ್ಳಬೇಕು.  ಇಲ್ಲದಿದ್ದರೆ ಈ ಸ್ಪರ್ಧಾ ಪ್ರಪಂಚದಲ್ಲಿ ಯಶಸ್ಸು ಕಾಣಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಸರ್ಕಾರವು ಯುವಪೀಳಿಗೆಗೆ ಪ್ರಜಾಪ್ರಭುತ್ವದ ಮೌಲ್ಯ, ಮತದಾನದ ಶಕ್ತಿಯ ಕುರಿತು ಅರಿವು ಮೂಡಿಸಲು ತೀರ್ಮಾನಿಸಿದೆ ಎಂದರು.

ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಬೇಕು - ಡಾ. ಹೆಚ್.ಸಿ. ಮಹದೇವಪ್ಪ
ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಕಳೆದ ಮೂರು ವರ್ಷಗಳಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಸೆಪ್ಟಂಬರ್ 15 ರಂದು ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಪ್ರೇರಣಾ ಶಕ್ತಿಯಾಗಿದ್ದಾರೆ. ಪ್ರಜಾಪ್ರಭುತ್ವದ ಬಗ್ಗೆ ಅರಿವು ಮೂಡಿಸಲು ಈ ಕಾರ್ಯಕ್ರಮ ಉತ್ತೇಜನ ನೀಡುತ್ತದೆ.  ಪ್ರಜಾಪ್ರಭುತ್ವ ಎನ್ನುವುದು ಒಂದು ಅಮೂಲ್ಯವಾದ ವಸ್ತು. ಶ್ರೀಸಾಮಾನ್ಯರ ಧ್ವನಿ ಎಷ್ಟು ಮುಖ್ಯ ಎಂಬುದನ್ನು ಈ ಕಾರ್ಯಕ್ರಮ ಪ್ರತಿಬಿಂಬಿಸುವ ಜೊತೆಗೆ ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಎತ್ತಿ ಹಿಡಿಯಲಿದೆ ಎಂದರು.

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ನೆನಪಿಟ್ಟುಕೊಳ್ಳುವಂತೆ 2023ರಲ್ಲಿ ನಮ್ಮ ರಾಜ್ಯದಲ್ಲಿ ವಿಧಾನಸೌಧದಲ್ಲಿ ಆಚರಿಸಲಾಯಿತು.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮ ಸ್ಮರಣೀಯವಾಯಿತು.  54 ದೇಶಗಳು, ಭಾರತದ 30 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 84 ದೇಶಗಳ 507 ಜಿಲ್ಲೆಗಳಾದ್ಯಂತ 2.31 ಕೋಟಿ ಜನರು ಈ ಕಾರ್ಯಕ್ರಮದಲ್ಲಿ ಭಾವಹಿಸಿದ್ದರು. ಈ ವಿಶಿಷ್ಟ ಆಚರಣೆಯು ಲಂಡನ್ ವಲ್ರ್ಡ್ ಬುಕ್ ಆಫ್ ರೆಕಾರ್ಡ್‍ನಲ್ಲಿ ಮಾನ್ಯತೆ ಪಡೆಯಿತು. 2024ರ ಸೆಪ್ಟಂಬರ್ 15 ರಂದು ರಾಜ್ಯವು ಬೀದರ್Àನಿಂದ ಚಾಮರಾಜನಗರದವರೆಗೆ 2,500 ಕಿ.ಮೀ ಉದ್ದದ ಮಾನವ ಸರಪಳಿಯೊಂದಿಗೆ ಪ್ರಜಾಪ್ರಭುತ್ವ ದಿನವನ್ನು ಆಚರಿಸಿತು. ಅರಣ್ಯ ಇಲಾಖೆಯ ಸಹಯೋಗದಲ್ಲಿ 10 ಲಕ್ಷ ಗಿಡಗಳನ್ನು ನೆಡಲಾಯಿತು ಎಂದರು.

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಅರಿವು ಮೂಡಿಸಬೇಕು - ಕೆ.ಹೆಚ್. ಮುನಿಯಪ್ಪ
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಮಾತನಾಡಿ, ಭಾರತ ರಾಷ್ಟ್ರದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕ ರಾಜ್ಯದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಪ್ರಾರಂಭಿಸಿ, ಮಾಡುತ್ತಿದ್ದೇವೆ. ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಮ್ಮ ದೇಶದ ಪ್ರತಿಯೊಬ್ಬ ನಾಗರಿಕರಿಗೂ ಹೆಮ್ಮೆಯ ದಿನವಾಗಿದೆ.  ಸಮಾಜದಲ್ಲಿ ಸಮಾನತೆ ಕಾಪಾಡುವ  ಮೂಲಕ ಬಸವಣ್ಣವರ ಚಿಂತನೆಯಲ್ಲಿ ದಾಪುಗಾಲು ಹಾಕಬೇಕು. ಇದಕ್ಕೆ ಶಕ್ತಿ ತುಂಬುವ ರೀತಿಯಲ್ಲಿ ಕೆಲಸ ಮಾಡಬೇಕು.  ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮ ಗಾಂಧೀಜಿ ಹಾಗೂ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಪ್ರತಿಯೊಬ್ಬ ನಾಗರೀಕರು ನೆನಪಿನಲ್ಲಿಟ್ಟುಕೊಳ್ಳಬೇಕು.  ಸಮಾಜದ ಕಟ್ಟಕಡೆಯ ವ್ಯಕ್ತಿಗೂ, ಮಕ್ಕಳಿಗೂ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಬಗ್ಗೆ ಅರಿವು ಮೂಡಿಸಬೇಕೆಂದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎ. ಹ್ಯಾರಿಸ್ ಅವರು ಡೆಮಾಕ್ರಸಿ ರೇಡಿಯೊವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ನಾರಾಯಣ ಸ್ವಾಮಿ, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಆರ್. ಸಂಪತ್ ರಾಜ್, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಅಭಿವೃಧ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ. ಮಣಿವಣ್ಣನ್, ಆಯುಕ್ತರಾದ ಡಾ. ರಾಕೇಶ್ ಸಿಂಗ್ ಸೇರಿದಂತೆ ಗಣ್ಯರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Publisher: ಕನ್ನಡ ನಾಡು | Kannada Naadu

Login to Give your comment
Powered by