ಕನ್ನಡ ನಾಡು | Kannada Naadu

ಕೊಳವೆ ಬಾವಿಯಲ್ಲಿ ಬಿದ್ದಿದ್ದ 2 ವರ್ಷದ ಮಗುವಿನ ರಕ್ಷಣೆ : ಫಲಿಸಿದ ಪ್ರಾರ್ಥನೆ

04 Apr, 2024



ವಿಜಯಪುರ : ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಮಗು ಸಾತ್ವಿಕ್ ನನ್ನು ಸುರಕ್ಷಿತವಾಗಿ ಹೊರ ತೆಗೆಯಲಾಗಿದ್ದು, ರಾಜ್ಯದ ಜನರ ಪ್ರಾರ್ಥನೆಗೆ ಕೊನೆಗೂ ಫಲ ಸಿಕ್ಕಿದೆ. 
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಮನೆ ಬಳಿ ಆಟವಾಡುತ್ತಿದ್ದ 2 ವರ್ಷದ ಮಗು ಸಾತ್ವಿಕ್ ಆಕಸ್ಮಿಕವಾಗಿ ನಿನ್ನೆ ಸಂಜೆ ಕೊಳವೆ ಬಾವಿಗೆ ಬಿದ್ದಿದ್ದ. ನಿನ್ನೆ ಸಂಜೆಯಿಂದ ಮಗು ರಕ್ಷಣೆಗಾಗಿ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ತಂಡ ನಿರಂತರವಾಗಿ ಕಾರ್ಯಾಚರಣೆ ನಡೆಸಿತ್ತು.

ಕೊಳವೆ ಬಾವಿಯ ಪಕ್ಕದಲ್ಲಿ ಅಡ್ಡಲಾಗಿ ಸುರಂಗ ಕೊರೆದು ಕೃತಕ ಆಮ್ಲಜನಕ ಪೂರೈಕೆ ಮಾಡಲಾಗಿತ್ತು. ಇನ್ನೊಂದೆಡೆ ಸುರಂಗ ಕೊರೆದು ಪೈಪ್ ಮೂಲಕ ಮಗು ಸಾತ್ವಿಕ್ ನನ್ನು ರಕ್ಷಣಾ ಸಿಬ್ಬಂದಿ ಹೊರತೆಗೆದಿದ್ದಾರೆ. ಸತತ 19 ಗಂಟೆಗಳ ಕಾಲ ಕೊಳವೆಬಾವಿಯಲ್ಲಿ ಮಗು ಜೀವನ್ಮರಣದ ನಡುವೆ ಹೋರಾಟ ನಡೆಸಿ ಸಾವು ಗೆದ್ದು ಬಂದಿದೆ. ಕೊನೆಗೂ ಸುರಕ್ಷಿತವಾಗಿ ಮಗುವನ್ನು ಹೊರ ತೆಗೆಯಲಾಗಿದೆ.

ಮಗುವನ್ನು ಹೊರ ತೆಗೆಯುತ್ತಿದ್ದಂತೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Publisher: ಕನ್ನಡ ನಾಡು | Kannada Naadu

Login to Give your comment
Powered by