ಕನ್ನಡ ನಾಡು | Kannada Naadu

ಉಚಿತ ಬ್ಯೂಟಿಪಾರ್ಲರ್ ಮ್ಯಾನೇಜ್‍ಮೆಂಟ್ ತರಬೇತಿ

06 Apr, 2024

 

ಬೆಂಗಳೂರು:   ಕೋಲಾರ ಹೊರವಲಯದ ಹೊನ್ನೇನಹಳ್ಳಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗಾಗಿ ಉಚಿತ ಬ್ಯೂಟಿಪಾರ್ಲರ್ ಮ್ಯಾನೇಜ್‍ಮೆಂಟ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 18 ರಿಂದ 45 ವರ್ಷ ವಯೋಮಿತಿಯುಳ್ಳವರು ಏಪ್ರಿಲ್ 15 ಸೋಮವಾರದಂದು ತರಬೇತಿ ಸಂಸ್ಥೆಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ರೇಷನ್ ಕಾರ್ಡ್, ಆಧಾರ್ ಕಾಡ್, 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು.  
 
ತರಬೇತಿಯು 30 ದಿನಗಳ ಕಾಲಾವಧಿಯದಾಗಿದ್ದು, ತರಬೇತಿ ಅವಧಿಯಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕೊಡಿಸಲಾಗುತ್ತದೆ. ಅಭ್ಯರ್ಥಿಗಳಿಗೆ ತರಬೇತಿ ವೇಳೆ ಉಚಿತವಾಗಿ ಊಟ ಹಾಗೂ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ. ತರಬೇತಿ ನಂತರ ಕೇಂದ್ರ ಸರ್ಕಾರದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.
 
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ತರಬೇತುದಾರರ ಮೊಬೈಲ್ ಸಂಖ್ಯೆ: 8971308776, 7760313833, 9483652240 ಗೆ ಸಂಪರ್ಕಿಸಬಹುದಾಗಿದೆ.

Publisher: ಕನ್ನಡ ನಾಡು | Kannada Naadu

Login to Give your comment
Powered by