ಕನ್ನಡ ನಾಡು | Kannada Naadu

ಮೆಡಿಕಲ್ ಕಾಲೇಜಿನ 47 ಜನ ವಿದ್ಯಾರ್ಥಿನಿಯರು ಅಸ್ವಸ್ಥ

06 Apr, 2024


ಬೆಂಗಳೂರು : ಮೆಡಿಕಲ್ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿರುವ ಘಟನೆ ನಡೆದಿದೆ.

ಬೆಂಗಳೂರಿನ ಬಿಎಂಸಿ ಹಾಸ್ಟೇಲ್ ನಲ್ಲಿದ್ದ 47 ವಿದ್ಯಾರ್ಥಿನಿಯರು ಏಕಾಎಕಿ ಅಸ್ವಸ್ಥರಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ತೀವ್ರ ವಾಂತಿ-ಭೇದಿಯಿಂದ ವಿದ್ಯಾರ್ಥಿನಿಯರು ಬಳಲುತ್ತಿದ್ದಾರೆ.
ಅಸ್ವಸ್ಥ ವಿದ್ಯಾರ್ಥಿನಿಯರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ 28 ವಿದ್ಯಾರ್ಥಿನಿಯರಿಗೆ ಟ್ರಾಮಾ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐವರಿಗೆ ಹೆಚ್ ಬ್ಲಾಕ್ ನಲ್ಲಿ ಹಾಗೂ ನಾಲ್ವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಡವೆ ಕಾಲರಾ ಪ್ರಕರಣಗಳು ಹೆಚ್ಚುತ್ತಿವೆ. ಒಂದೆಡೆ ಕುಡಿಯುವ ನೀರಿನ ಸಮಸ್ಯೆ, ಇನ್ನೊಂದೆಡೆ ಬಿಸಿಲ ಝಳದಿಂದಾಗಿ ನಗರದಲ್ಲಿ ಹಲವರು ವಿವಿಧ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿನಿಯರು ಇದ್ದಕ್ಕಿದ್ದಂತೆ ವಾಂತಿ-ಬೇಧಿಯಿಂದ ಬಳಲುತ್ತಿರುವುದು ಕಾಲರಾ ಶಂಕೆ ಕೂಡ ವ್ಯಕ್ತವಾಗಿದೆ.

Publisher: ಕನ್ನಡ ನಾಡು | Kannada Naadu

Login to Give your comment
Powered by