ಕನ್ನಡ ನಾಡು | Kannada Naadu

ಮೋದಿ ಪ್ರಧಾನಿ ಆಗಲೆಂದು ಕೈ ಬೆರಳು ಕತ್ತರಿಸಿ ಕಾಳಿಗೆ ಅರ್ಪಿಸಿದ ಯುವಕ

07 Apr, 2024


ಕಾರವಾರ : ಮೋದಿ ಅವರು ಮತ್ತೆ ಪ್ರಧಾನಿ ಆಗಲೆಂದು ಅವರ ಅಭಿಮಾನಿಗಳು ಹಲವಾರು ರೀತಿಯಲ್ಲಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸುತ್ತಾರೆ.ಆದರೆ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ವ್ಯಕ್ತಿಯೊಬ್ಬ ತನ್ನ ಕೈ ಬೆರಳನ್ನೇ ಕತ್ತರಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಕಾಳಿಗೆ ರಕ್ತ ಅರ್ಪಿಸಿರುವ ಘಟನೆ ನಡೆದಿದೆ.

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಪ್ರಾರ್ಥಿಸಿ ವ್ಯಕ್ತಿಯೊಬ್ಬ ಎಡಗೈ ಬೆರಳನ್ನು ಕತ್ತರಿಸಿ ರಕ್ತ ಅರ್ಪಿಸಿದ ಭಯಾನಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ. ಕೈಬೆರಳು ಕತ್ತರಿಸಿ ಕಾಳಿ ಮಾತೆಗೆ ಅರ್ಪಿಸಿದ ವ್ಯಕ್ತಿಯನ್ನು ಅರುಣ್ ವರ್ಣೇಕರ್ ಎಂದು ಗುರುತಿಸಲಾಗಿದೆ.
ಮೋದಿ ಮೊದಲ ಬಾರಿ ಚುನಾವಣೆಗೆ ನಿಂತಾಗ ಕೂಡ ಇದೇ ಅರುಣ್ ರಕ್ತದಲ್ಲಿ ಕಾಳಿಗೆ ಹರಕೆ ಇಟ್ಟಿದ್ದರು. ಈ ಹಿಂದೆಯೂ ಬೆರಳು ಕೊಯ್ದುಕೊಂಡು ಮೋದಿ ಗೆಲುವಿಗಾಗಿ ಕಾಳಿ ಮಾತೆಗೆ ಹರಕೆ ನೀಡಿದ್ದರು. ಇದು ಕೊನೆಯಬಾರಿ ಆದ್ದರಿಂದ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಬೆರಳನ್ನೇ ತುಂಡರಿಸಿ ಕಾಳಿಗೆ ಅರ್ಪಿಸಿದ್ದಾರೆ.

ಈ ವ್ಯಕ್ತಿ ಮೋದಿಗಾಗಿ ಗುಡಿಯೊಂದನ್ನು ನಿರ್ಮಿಸಿ ಪೂಜೆ ಕೂಡ ಮಾಡುತ್ತಿದ್ದಾರೆ.ಬೆರಳು ತುಂಡುಮಾಡಿಕೊಂಡು ಅದರಿಂದ ಸುರಿದ ರಕ್ತದಲ್ಲಿ, ”ಮಾ ಕಾಳಿಮಾತಾ ಮೋದಿ ಬಾಬಾಕೋ ರಕ್ಷಾ ಕರೋ” ಎಂದು ಬರೆದಿದ್ದಾರೆ. ”ಮೋದಿ ಬಾಬ ಪಿಎಂ, 3 ಬಾರ್ 78ತಕ್ 378, 378+ ಮೇರ ಮೋದಿ ಬಾಬಾ ಸಬ್ ಸೆ ಮಹಾನ್’ ಎಂದು ಗೋಡೆ ಮೇಲೆ ಹಾಗೂ ಪೋಸ್ಟರ್​​ನಲ್ಲಿ ಅರುಣ್ ಬರೆದಿದ್ದಾರೆ.

Publisher: ಕನ್ನಡ ನಾಡು | Kannada Naadu

Login to Give your comment
Powered by