ಬೆಂಗಳೂರು: ಲಿಕ್ಕರ್ ಹಗರಣಕ್ಕೆ ಸಂಬಂಧಿಸಿ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ವಿರೋಧಿಸಿ ಏಪ್ರಿಲ್ 7, ಭಾನುವಾರದಂದು ಆಮ್ ಆದ್ಮಿ ಪಕ್ಷದ ಕಾರ್ಯಕರ್ಯರು ಹೊಸದಿಲ್ಲ, ಬೆಂಗಳೂರು ಸೇರಿದಂತೆ ದೇಶಾದ್ಯಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.
ದಿಲ್ಲಿಯ ಜಂತರ್ ಮಂತರ್ ನಲ್ಲಿ ಒಟ್ಟುಗೂಡಿರುವ ಆಮ್ ಆದ್ಮಿಯ ಎಲ್ಲ ಶಾಸಕರು, ಕಛೇರಿ ಸಿಬ್ಬಂದಿ ಒಂದು ದಿನದ ಉಪವಾಸವನ್ನು ನಡೆಸುತ್ತಿದ್ದಾರೆ. ಇನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ.
ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ವಿರೋಧಿಸಿ ಆಮ್ ಆದ್ಮಿ ಕಾರ್ಯಕರ್ತರು ಭಾನುವಾರ ದೇಶಾದ್ಯಂತ ಸಾಮೂಹಿಕ ಪ್ರತಿಭಟನೆಗೆ ಮುಂದಾಗಿದ್ದಾರೆ. ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ದಿಲ್ಲಿಯ ಜಂತರ್ ಮಂತರ್, ಬೆಂಗಳೂರಿನ ಫ್ರೀಡಂ ಪಾರ್ಕ್ ಸೇದಿರಂತೆ ಹಲವಡೆ ಉಪವಾಸ ಪ್ರತಿಭಟನೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿರುವ ಆಪ್ ಕಾರ್ಯಕರ್ತರು ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ. ಹೀಗಾಗಿಯೇ ಅರವಿಂದ ಕೇಜ್ರಿವಾಲ್ ಅವರನ್ನು ಪ್ರಚಾರದಿಂದ ದೂರ ಇಡಲು ಬಿಜೆಪಿ ಇಡಿಯನ್ನು ಬಳಸಿದ ಎಂದಿದ್ದಾರೆ.
Publisher: ಕನ್ನಡ ನಾಡು | Kannada Naadu