ಬೆಂಗಳೂರು : ಸೂರ್ಯ ಪೂರ್ವದಲ್ಲಿ ಹುಟ್ಟೋದು ಎಷ್ಟು ಸತ್ಯವೋ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಪ್ರೊ.ರಾಜೀವ್ ಗೌಡ ಗೆಲ್ಲೋದು ಅಷ್ಟೇ ಸತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಚಿತವಾಗಿ ನುಡಿದರು.
ಪ್ರೊ.ರಾಜೀವ್ ಗೌಡ ಪರವಾಗಿ ಮಲ್ಲೇಶ್ವರಂ, ಸುಬ್ರಮಣ್ಯನಗರ, ಗಾಯತ್ರಿನಗರದ ರಸ್ತಡಗಳಲ್ಲಿ ಎರಡು ಗಂಟೆಗೂ ಹೆಚ್ಚು ಲಾಲ ರೋಡ್ ಶೋ ನಡೆಸಿದ ಬಳಿಕ ಮಾತನಾಡಿದರು.
ಕೇಂದ್ರ ಕೃಷಿ ಸಚಿವೆಯಾಗಿದ್ದ ಶೋಭಾ ಕರಂದ್ಲಾಜೆ ರಾಜ್ಯದ ರೈತರ ಪರವಾಗಿ ಯಾವ ಕೆಲಸಗಳನ್ನೂ ಮಾಡಲಿಲ್ಲ. ಸಂಸದೆಯಾಗಿಯೂ ನಾಡಿನ ಪರವಾಗಿ ಕೆಲಸ ಮಾಡಲಿಲ್ಲ. ಇಂಥವರಿಗೆ ಬೆಂಬಲಿಸಿದರೆ ನಿಮ್ಮ ಮತಕ್ಕೆ ಗೌರವ ಬರುತ್ತದಾ ಎಂದು ಪ್ರಶ್ನಿಸಿದರು.
Publisher: ಕನ್ನಡ ನಾಡು | Kannada Naadu