ಹಾವೇರಿ:ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರ ಪರವಾಗಿ ಅವರ ಪುತ್ರ ಭರತ ಬೊಮ್ಮಾಯಿ ಪ್ರಚಾರ ನಡೆಸಿದರು.
ಹಾವೇರಿ ನಗರದ ವಿವಿಧ ಬಡಾವಣೆಗಳಲ್ಲಿ ಪ್ರಚಾರ ನಡೆಸಿ ತಂದೆಯ ಪರವಾಗಿ ಮತ ಯಾಚನೆ ಮಾಡಿದರು. ತಂದೆ ಪ್ರತಿನಿಧಿಸುವ ಕ್ಷೇತ್ರದ ತುಂಬೆಲ್ಲ ಪ್ರಚಾರ ಮಾಡುತ್ತಿದ್ದೇನೆ. ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ನಮ್ಮ ತಂದೆ ಪರವಾದ ಜನರ ಒಲವಿದೆ. ನಮ್ಮ ತಂದೆ ಈ ಚುನಾವಣೆಯಲ್ಲಿ ಜಯಗಳಿಸುತ್ತಾರೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದಕ್ಕೂ ಮೊದಲು ಹಾವೇರಿ ಜಿಲ್ಲೆಯ ನಾಗೇಂದ್ರಮಟ್ಟಿಯ ರಾಕ್ ಸ್ಟಾರ್ ಖ್ಯಾತಿಯ ಹೋರಿ ಇಂದು ನಿಧನ ಹೊಂದಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ ಬೊಮ್ಮಾಯಿಯವರು ನಾಗೇಂದ್ರಮಟ್ಟಿಗೆ ತೆರಳಿ ರಾಕ್ ಸ್ಟಾರ್ ಹೋರಿಯ ಅಂತಿಮ ದರ್ಶನ ಪಡೆದರು.
Publisher: ಕನ್ನಡ ನಾಡು | Kannada Naadu