ಬೆಂಗಳೂರು : ದೇಶದ ಬಹುತೇಕ ರಾಜ್ಯಗಳಲ್ಲಿ ತಾಪಮಾನದ ಪ್ರಮಾಣ ಹೆಚ್ಚಾಗುತ್ತಲಿದೆ. ಇನ್ನು ಕೆಲವೆಡೆ ಮಾತ್ರ ಆಗಾಗ ಮಳೆಯಾಗುತ್ತಿದೆ. ಹಾಗೆಯೇ ಇಂದಿನಿಂದ ಹಲವು ದಿನಗಳ ಕಾಲ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅದರಲ್ಲೂ ಇಂದು (ಏಪ್ರಿಲ್ 10) ಅರುಣಾಚಲ ಪ್ರದೇಶದಲ್ಲಿ ಜಮ್ಮು-ಕಾಶ್ಮೀರ, ಲಡಾಖ್, ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಗುಡುಗು ಸಹಿತ ಪ್ರತ್ಯೇಕ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಅಂಡಮಾನ್-ನಿಕೋಬಾರ್ ದ್ವೀಪಗಳು, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಒಡಿಶಾ, ಜಾರ್ಖಂಡ್, ಪೂರ್ವ ಉತ್ತರ ಪ್ರದೇಶ, ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ತೆಲಂಗಾಣ, ಕರ್ನಾಟಕದ ಕೆಲವೆಡೆ, ಕೇರಳದಲ್ಲಿ ಸಾಧರಣೆ ಮಳೆಯಾಗುವ ಸಾಧ್ಯೆತೆಯಿದೆ ಎಂದು ಮುನ್ಸೂಚನ ನೀಡಿದೆ.
ಮತ್ತೊಂದೆಡೆ ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ ಮತ್ತು ಕೇರಳದ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು 40 °C ಗಿಂತ ಹೆಚ್ಚಾಗುವ ಸಾಧ್ಯತೆಯಿದೆ ಅಂತಳು ತಿಳಿಸಿದೆ. ಏಪ್ರಿಲ್ 11ರಂದು ಎಲ್ಲೆಲ್ಲಿ ಮಳೆ: ಗುರುವಾರ (ಏಪ್ರಿಲ್ 11) ಅರುಣಾಚಲ ಪ್ರದೇಶ, ಹಿಮಾಚಲ ಪ್ರದೇಶ ಮತ್ತು ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಗುಡುಗು ಸಹಿತ ಚದುರಿದ ಮಳೆ ಬೀಳುವ ಸಾಧ್ಯತೆ ಇದೆ.
ಅಲ್ಲದೆ, ಪಶ್ಚಿಮ ಬಂಗಾಳ, ಸಿಕ್ಕಿಂ, ಉತ್ತರಾಖಂಡ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಒಡಿಶಾ, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಮಧ್ಯ ಮಹಾರಾಷ್ಟ್ರ, ಕರಾವಳಿ ಆಂಧ್ರಪ್ರದೇಶ, ಯಾನಂ, ತೆಲಂಗಾಣ, ತಮಿಳುನಾಡು, ಪುದುಚೇರಿ, ಕಾರೈಕಲ್, ಕರ್ನಾಟಕದ ಹಲವೆಡೆ ಮಳೆಯಾಗಬಹುದು ಎಂದು ತಿಳಿಸಿದೆ. ಬಂಗಾಳ ಕೊಲ್ಲಿಯ ಮೇಲೆ ಆಂಟಿಸೈಕ್ಲೋನ್ ಹಿನ್ನೆಲೆ, ಪೂರ್ವ ಭಾರತ, ಮಧ್ಯ ಭಾರತದ ದಕ್ಷಿಣ ಭಾಗಗಳು ಮತ್ತು ಪಕ್ಕದ ಪ್ರದೇಶಗಳಲ್ಲಿ ಹಲವಾರು ದಿನಗಳವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯೆತೆ ಹೆಚ್ಚಿದೆ ಎಂದು ತಿಳಿಸಿದೆ.
ಬುಧವಾರದಿಂದ-ಗುರುವಾರದವರೆಗೆ ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ಚಂಡಮಾರುತದ ಪ್ರಭಾವ ಬೀರಲಿದ್ದು, ಈ ಹಿನ್ನೆಲೆ ಏಪ್ರಿಲ್ 10-12ರಿಂದ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಹಲವೆಡೆ ಲಘು ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ. ಏಪ್ರಿಲ್ 13-15ರವರೆಗೆ ಉತ್ತರ ಪ್ರದೇಶ, ಪಂಜಾಬ್ ಮತ್ತು ಹರಿಯಾಣದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ನಿರೀಕ್ಷಿಸಲಾಗಿದೆ. ಇದೇ ವೇಳೆ ರಾಜಸ್ಥಾನದ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ.
ಏಪ್ರಿಲ್ 14-15ರವರೆಗೆ ಜಮ್ಮು-ಕಾಶ್ಮೀರದದಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 14ರಂದು ಹಿಮಾಚಲ ಪ್ರದೇಶದಲ್ಲೂ ಇದೇ ವಾತಾವರಣ ಮುಂದುವರೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಏಪ್ರಿಲ್ 13-14ರಂದು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಅಲ್ಲಲ್ಲಿ ಆಲಿಕಲ್ಲು ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಏಪ್ರಿಲ್ 13ರಂದು ರಾಜಸ್ಥಾನದ ಪ್ರತ್ಯೇಕ ಸ್ಥಳಗಳಲ್ಲಿ ಬಿರುಗಾಳಿ ವೇಗವು ಗಂಟೆಗೆ 50-60 ಕಿಲೋ ಮೀಟರ್ ಇರಲಿದೆ. ಇದನ್ನು ಮೀರಿ 70 ಕಿಲೋ ಮೀಟರ್‌ವರೆಗೂ ತಲುಪುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಛತ್ತೀಸ್‌ಗಢ, ಪೂರ್ವ ಮಧ್ಯಪ್ರದೇಶ ಮತ್ತು ಪಕ್ಕದ ಪ್ರದೇಶಗಳಲ್ಲಿ ಹಲವು ದಿನಗಳವರೆಗೆ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ ಇರುತ್ತದೆ ಎಂದು ತಿಳಿಸಿದೆ.
Publisher: ಕನ್ನಡ ನಾಡು | Kannada Naadu